Monday, November 25, 2024
Monday, November 25, 2024

ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಸಿದ್ಧತೆ ಕೈಗೊಳ್ಳಿ: ಯಶಪಾಲ್ ಸುವರ್ಣ

ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಸಿದ್ಧತೆ ಕೈಗೊಳ್ಳಿ: ಯಶಪಾಲ್ ಸುವರ್ಣ

Date:

ಉಡುಪಿ, ಮಾ. 11: ಮುಂಬರುವ ಬೇಸಿಗೆ ಅವಧಿಯಲ್ಲಿ ಉಡುಪಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಪೂರೈಕೆಗೆ ಸಮಸ್ಯೆಯಾಗದಂತೆ ಈಗಲೇ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು. ಉಡುಪಿ ನಗರಸಭೆ ಹಾಗೂ ತಾಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆ, ಹಕ್ಕು ಪತ್ರ ಮಂಜೂರು, ಸಾಮಾಜಿಕ ಭದ್ರತೆ ಯೋಜನೆಗಳ ಸಹಿತ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕಡತಗಳ ಶೀಘ್ರ ವಿಲೇವಾರಿಗೆ ಸೂಚನೆ ನೀಡಿದರು.

ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ನೀರಿನ ಮೂಲಗಳ ಸಮರ್ಪಕ ನಿರ್ವಹಣೆ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಮುಂತಾದ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ತಾಲೂಕಿನಾದ್ಯಂತ ಬಾಕಿ ಇರುವ ಹಕ್ಕುಪತ್ರಗಳ ವಿತರಣೆ ಹಾಗೂ ಸರಕಾರಿ ಭೂಮಿಗಳನ್ನು ಗುರುತಿಸಿ ಸಂರಕ್ಷಿಸುವ ನಿಟ್ಟಿನಲ್ಲಿ ಬೋರ್ಡ್ ಅಳವಡಿಕೆ ಹಾಗೂ ಸಾರ್ವಜನಿಕರ ಭೇಟಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಸಮಯ ನಿಗದಿಪಡಿಸಿ ಕಚೇರಿಯಲ್ಲಿ ಭೇಟಿಯ ಸಮಯದ ಮಾಹಿತಿ ನೀಡುವಂತೆ ಹೇಳಿದರು. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಜಾತಿ ಆದಾಯ ಪ್ರಮಾಣ ಪತ್ರ ನೀಡಲು ವಿನಾಕಾರಣ ವಿಳಂಬ ಮಾಡದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಉಡುಪಿ ತಹಶೀಲ್ದಾರ್ ಗುರುರಾಜ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದೇವರಾಜ ಎಂ. ಹಿತ್ತಲಕೊಪ್ಪ, ನಗರಸಭಾ ಸದಸ್ಯರು, ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!