Saturday, October 26, 2024
Saturday, October 26, 2024

ಮುಖ್ಯಮಂತ್ರಿಗಳ ಗ್ಯಾರಂಟಿ ಸಮಾವೇಶಕ್ಕೆ ವಿದ್ಯಾರ್ಥಿಗಳ ದುರ್ಬಳಕೆ: ಯಶ್ಪಾಲ್ ಸುವರ್ಣ ಆಕ್ರೋಶ

ಮುಖ್ಯಮಂತ್ರಿಗಳ ಗ್ಯಾರಂಟಿ ಸಮಾವೇಶಕ್ಕೆ ವಿದ್ಯಾರ್ಥಿಗಳ ದುರ್ಬಳಕೆ: ಯಶ್ಪಾಲ್ ಸುವರ್ಣ ಆಕ್ರೋಶ

Date:

ಉಡುಪಿ, ಮಾ.12: ಉಡುಪಿಯಲ್ಲಿ ನಾಳೆ ನಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯೋಜಿಸಿರುವ ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆಯ ಮೂಲಕ ಒತ್ತಡ ಹೇರುತ್ತಿರುವ ಸರ್ಕಾರದ ವಿರುದ್ಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಪರೀಕ್ಷೆಗೆ ತಯಾರಿ ನಡೆಸುವ ಸಂದರ್ಭದಲ್ಲಿ ಸರಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ.

ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದರೆ ಇಂದು ಸಮಾವೇಶಕ್ಕೆ ಫಲಾನುಭವಿಗಳ ಬದಲು ವಿದ್ಯಾರ್ಥಿಗಳನ್ನು ಕರೆತರಲು ಶಾಲಾ ಕಾಲೇಜು ಮುಖ್ಯಸ್ಥರಿಗೆ ಒತ್ತಡ ಹೇರುವ ಸಂದರ್ಭ ಸೃಷ್ಟಿಯಾಗಿರುವುದು ರಾಜ್ಯ ಸರಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗೆ ಯಾವುದೇ ವಿಶೇಷ ಯೋಜನೆ ರೂಪಿಸದ ಸರ್ಕಾರ ಸಮಾವೇಶಕ್ಕೆ ಮಾತ್ರ ವಿದ್ಯಾರ್ಥಿಗಳನ್ನು ಬಳಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದ್ದು, ವಿದ್ಯಾರ್ಥಿಗಳ ಪೋಷಕರು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ. ಮಣಿಪಾಲ: ಜಾಗೃತಿ ನಡಿಗೆ

ಮಣಿಪಾಲ, ಅ.26: ಪ್ರತಿವರ್ಷ ಅಕ್ಟೋಬರ್‌ನ ಎರಡನೇ ಶನಿವಾರದಂದು, ಉಪಶಾಮಕ ಆರೈಕೆ ಅಗತ್ಯಗಳೊಂದಿಗೆ...

ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶ

ಕೋಟ, ಅ.26: ಐವತ್ತು ವರ್ಷದ ಇತಿಹಾಸವಿರುವ ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ,...

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...

ರೈತರುಗಳು ಕೃಷಿ ವಲಯಕ್ಕೆ ಸಂಬಂಧಿಸಿದ ಮಾಹಿತಿಯನ್ನು, ಪಡೆದು ಸಮರ್ಪಕವಾಗಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.26: ಕೃಷಿ ಕ್ಷೇತ್ರಕ್ಕೆ ಪ್ರಾಧ್ಯಾನ್ಯತೆ ನೀಡುವುದರೊಂದಿಗೆ, ಕೃಷಿ ವಲಯಕ್ಕೆ ಸಂಬಂಧಿಸಿದ...
error: Content is protected !!