ಉಡುಪಿ, ಮಾ.13: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ನೋಂದಾಯಿಸಲಾಗುತ್ತಿದ್ದು, 2022 ರ ಮಾರ್ಚ್ 31 ರ ವರೆಗೆ ನೋಂದಣಿಯಾದ ಮತ್ತು ಸದರಿ ದಿನಾಂಕದೊಳಗೆ ಅಪಘಾತಗೊಂಡ ಫಲಾನುಭವಿಗಳು ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಅಪಘಾತದಿಂದ ಮರಣ ಹೊಂದಿದ್ದಲ್ಲಿ ಹಾಗೂ ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಕಾರ್ಮಿಕ ಅಧಿಕಾರಿಗಳ ಕಛೇರಿ, ಉಡುಪಿ ಉಪ ವಿಭಾಗ, ಎ ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ:201, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ಇವರಿಗೆ ಮಾರ್ಚ್ 31 ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಗೆ ಅರ್ಜಿ ಆಹ್ವಾನ
ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಗೆ ಅರ್ಜಿ ಆಹ್ವಾನ
Date: