ಉಡುಪಿ, ಮಾ.13: ಉಡುಪಿಯ ಕುಂಜಿಬೆಟ್ಟು ಲಕ್ಷ್ಮೀ ನಾರಾಯಣ ರಾವ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಬಸವಣ್ಣನವರ ತತ್ವಗಳನ್ನಾಧರಿಸಿ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಮೀನುಗಾರಿಕೆ ಇಲಾಖೆಗೆ 3 ಸಾವಿರ ಕೋಟಿ ರೂ. ಬಜೆಟ್ ನಲ್ಲಿ ಇಡಲಾಗಿದೆ. ಮೀನುಗಾರರಿಗೆ 10 ಸಾವಿರ ಮನೆಗಳನ್ನು ನೀಡಲಾಗುತ್ತಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೊಳಿಸಲಾಗುವುದು. ಜನರ ಕಷ್ಟಸುಖಗಳಲ್ಲಿ ಭಾಗಿಯಾಗುವ ನಮ್ಮ ಜೊತೆ ಕರಾವಳಿಯ ಜನ ನಿಲ್ಲಬೇಕು. ಅಚ್ಛೇ ದಿನ್ ಆಯೆಂಗೆ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದ ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಆದರೆ ನಮ್ಮ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿದೆ. ಈ ವರ್ಷ ರೂ. 36 ಸಾವಿರ ಕೋಟಿ ಹಾಗೂ ಮುಂದಿ ವರ್ಷ 52,009 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಬಜೆಟ್ ನಲ್ಲಿ ನಿಗದಿಪಡಿಸಿದ್ದರೂ, ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳಲಾಗುತ್ತಿದೆ. ಅಭಿವೃದ್ಧಿಗೆ 1.20 ಲಕ್ಷ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಇಡಲಾಗಿದೆ. ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ನಮ್ಮ ಸರ್ಕಾರದ ಗುರಿ. 2023 ರ ಜೂನ್ 11 ಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲೆಯಲ್ಲಿ 87 ಲಕ್ಷ ಮಹಿಳೆಯರು 33 ಕೋಟಿ ರೂ.ಗಳ ವೆಚ್ಚದಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 3,11,652 ಜನ ಲಾಭ ಪಡೆಯುತ್ತಿದ್ದು, ಇದಕ್ಕಾಗಿ 114 ಕೋಟಿ ರೂ. ವ್ಯಯಿಸಲಾಗುತ್ತಿದೆ. ಅನ್ನಭಾಗ್ಯ 7,66,000 ಜನರಿಗೆ ಉಚಿತ ಅಕ್ಕಿ ನೀಡಲಾಗುತ್ತಿದೆ. ರಾಜ್ಯದ ಬಡವರಿಗೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರ್ಕಾರ ಎಂದಿಗೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ. ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂ. ನಮ್ಮ ಸರ್ಕಾರ ನೀಡುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಮಾಜಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಂಶುಮಾನ್, ಗೇರು ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಖಂಡರಾದ ವಿನಯ್ ಕುಮಾರ್ ಸೊರಕೆ, ಉದಯಕುಮಾರ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ, ಸರ್ಕಾರದ ಕಾರ್ಯದರ್ಶಿಗಳಾದ ಡಾ.ಎಂ.ಟಿ.ರೇಜು, ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಜಿ.ಪಂ ಸಿಇಒ ಪ್ರತೀಕ್ ಬಾಯಲ್ ಉಪಸ್ಥಿತರಿದ್ದರು.