Monday, November 25, 2024
Monday, November 25, 2024

ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

Date:

ನವದೆಹಲಿ, ಮಾ.16: (ಉಡುಪಿ ಬುಲೆಟಿನ್ ವರದಿ) ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗಿದೆ. ಶನಿವಾರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ತಕ್ಷಣಕ್ಕೆ ಅನ್ವಯವಾಗುವಂತೆ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ಮತ ಎಣಿಕೆಯ ದಿನದವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಶುಕ್ರವಾರ ಮತ್ತು ಮೇ 7 ಮಂಗಳವಾರ ರಂದು ಲೋಕಸಭಾ ಚುನಾವಣೆ ನಡೆಯಲಿದೆ.

ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ (10 ರಾಜ್ಯಗಳು) ಮತದಾನ ಏಪ್ರಿಲ್ 19 ಶುಕ್ರವಾರ ನಡೆಯಲಿದೆ, ಎರಡನೆಯ ಹಂತದ ಮತದಾನ (ಕರ್ನಾಟಕ ಸೇರಿದಂತೆ 4 ರಾಜ್ಯಗಳು) ಏಪ್ರಿಲ್ 26 ಶುಕ್ರವಾರ ನಡೆಯಲಿದೆ. ಮೂರನೇ ಹಂತದ (6 ರಾಜ್ಯಗಳು) ಮತದಾನ ಮೇ 7 (ಕರ್ನಾಟಕ ಎರಡನೆಯ ಹಂತ) ಮಂಗಳವಾರ ನಡೆಯಲಿದೆ. ನಾಲ್ಕನೇ ಹಂತದ (3 ರಾಜ್ಯಗಳು) ಮತದಾನ ಮೇ 13 ಸೋಮವಾರ ನಡೆಯಲಿದೆ. ಐದನೇ ಹಂತ (3 ರಾಜ್ಯಗಳು)- ಮೇ 20 ಸೋಮವಾರ, ಆರನೇ ಹಂತ- (2 ರಾಜ್ಯಗಳು) ಮೇ 25 ಶನಿವಾರ ಮತ್ತು ಏಳನೇ ಹಂತ- (8 ರಾಜ್ಯಗಳು) ಜೂನ್ 1 ಶನಿವಾರ ನಡೆಯಲಿದೆ. ದೇಶಾದ್ಯಂತ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಜೂನ್ 4 ರಂದು ನಡೆಯಲಿದೆ.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಉಡುಪಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 8 ಕೊನೆಯ ದಿನ ಎಂದು ಹೇಳಿದರು.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನ, ನಾಮಪತ್ರ ಹಿಂಪಡೆಯಲು ಏಪ್ರಿಲ್ 22 ಕೊನೆಯ ದಿನ.

ದೇಶದಲ್ಲಿ ಒಟ್ಟು 49.7 ಕೋಟಿ ಪುರುಷ ಮತದಾರರಿದ್ದಾರೆ, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48,000 ತೃತೀಯ ಲಿಂಗದವರಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತರು ಮಾಹಿತಿ ನೀಡಿದರು. 85 ವಯಸ್ಸು ಮತ್ತು ಅದಕ್ಕಿಂತ ಮೇಲ್ಪಟ್ಟ 82 ಲಕ್ಷ ಮತದಾರರಿದ್ದಾರೆ. 1.8 ಕೋಟಿ ಮಂದಿ ಮೊದಲ ಬಾರಿ ಮತದಾನ ಮಾಡುವವರಿದ್ದಾರೆ (ಫಸ್ಟ್ ಟೈಮ್ ವೋಟರ್ಸ್ – 18 ಮತ್ತು 19 ವಯೋಮಿತಿಯವರು). 88.4 ಲಕ್ಷ ದಿವ್ಯಾಂಗ ಮತದಾರರಿದ್ದಾರೆ, 2.18 ಲಕ್ಷ ಮಂದಿ ಶತಾಯುಷಿ ಮತದಾರರಿದ್ದಾರೆ. ಯುವ ಮತದಾರರು (20-29 ವರ್ಷದ ವಯೋಮಿತಿಯವರು) 19.74 ಕೋಟಿ ಇದ್ದಾರೆ.

ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್, ಡಾ. ಸುಕ್ಬಿರ್ ಸಿಂಗ್ ಸಂಧು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!