ನವದೆಹಲಿ, ಮಾ.16: (ಉಡುಪಿ ಬುಲೆಟಿನ್ ವರದಿ) ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಶನಿವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉಡುಪಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 8 ಕೊನೆಯ ದಿನ ಎಂದು ಹೇಳಿದರು.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನ, ನಾಮಪತ್ರ ಹಿಂಪಡೆಯಲು ಏಪ್ರಿಲ್ 22 ಕೊನೆಯ ದಿನ ಎಂದು ಹೇಳಿದರು. ಮತ ಎಣಿಕೆ ಜೂನ್ 4 ರಂದು ನಡೆಯಲಿದೆ.