ಕೋಟ, ಮಾ.19: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ ಹಂಗಾರಕಟ್ಟೆಯ ಬಿ.ಡಿ ಶೆಟ್ಟಿ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಇಲ್ಲಿ ಜರಗಿತು. ಕಾಲೇಜಿನ ವ್ಯವಸ್ಥಾಪಕ ತಾರಾನಾಥ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕಸಾಪ ಬ್ರಹ್ಮಾವರ ತಾಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಾಹಿತ್ಯ ಪರಿಷತ್ತಿನ ಉದ್ದೇಶವನ್ನು ತಿಳಿಸಿದರು. ಸಾಹಿತಿ ಪ್ರೊ.ಉಪೇಂದ್ರ ಸೋಮಯಾಜಿ ದತ್ತಿ ಉಪನ್ಯಾಸ ನೀಡಿದರು. ಶಿಕ್ಷಣ ತಜ್ಞ ಗಣೇಶ್ ಜಿ. ಹಾಗೂ ಸವಿತಾ ಶಾಸ್ತ್ರಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಗತ್ಯದ ಬಗ್ಗೆ ವಿವರಿಸಿದರು. ಅತಿಥಿಗಳಾಗಿ ಕಸಾಪ ತಾಲೂಕು ನಿಕಟಪೂರ್ವ ಅಧ್ಯಕ್ಷ ಸೂರಾಲು ನಾರಾಯಣ ಮಡಿ, ಬಿ.ಡಿ ಶೆಟ್ಟಿ ಕಾಲೇಜು ಪ್ರಾಂಶುಪಾಲೆ ಸ್ಮಿತಾ ಉಪಸ್ಥಿತರಿದ್ದರು. ಕಾಲೇಜಿನ ಅಧ್ಯಾಪಕ ಸುಕುಮಾರ್ ಕಾರ್ಯಕ್ರಮ ನಿರೂಪಿಸಿ, ಕಸಾಪ ಬ್ರಹ್ಮಾವರ ತಾಲೂಕು ಘಟಕದ ಕಾರ್ಯದರ್ಶಿ ಜ್ಯೋತಿ ಕೃಷ್ಣ ಪೂಜಾರಿ ವಂದಿಸಿದರು.
ಹಂಗಾರಕಟ್ಟೆ: ಕ.ಸಾ.ಪ. ದತ್ತಿ ಉಪನ್ಯಾಸ
ಹಂಗಾರಕಟ್ಟೆ: ಕ.ಸಾ.ಪ. ದತ್ತಿ ಉಪನ್ಯಾಸ
Date: