Sunday, November 24, 2024
Sunday, November 24, 2024

ಬಿ. ಬಿ. ಹೆಗ್ಡೆ ಕಾಲೇಜು: ಜಲ ಜಾಗೃತಿ ತೇರು

ಬಿ. ಬಿ. ಹೆಗ್ಡೆ ಕಾಲೇಜು: ಜಲ ಜಾಗೃತಿ ತೇರು

Date:

ಕುಂದಾಪುರ, ಮಾ.30: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಯುವ ರೆಡ್‌ಕ್ರಾಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಜಲ ಜಾಗೃತಿ ಅಭಿಯಾನದ ಅಂಗವಾಗಿ ‘ಜಲ ಜಾಗೃತಿ ತೇರು’ ಕಾರ್ಯಕ್ರಮ ಜರಗಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿಯವರು ಜಲ ಜಾಗೃತಿ ರಥವನ್ನು ಸಾಂಕೇತಿಕವಾಗಿ ಎಳೆಯುವ ಮೂಲಕ ಉದ್ಘಾಟಿಸಿ, ಸಮಸ್ತ ಜೀವ ಜಗತ್ತಿನ ಜೀವಾಮೃತ ನೀರು. ಕ್ಲಪ್ತ ಸಮಯದಲ್ಲಿ ನೀರಿನ ಸಂರಕ್ಷಣೆಯ ಬಗ್ಗೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಸಂಭವಿಸುವ ಜಲಕುಸಿತಕ್ಕೆ ನಾವೇ ಹೊಣೆಯಾಗಲಿದ್ದೇವೆ. ನೀರಿನ ಸದ್ಬಳಕೆಯ ಕುರಿತು ಜಾಗೃತಿ ಮೂಡಿಸಬೇಕಾಗಿರುವುದು ವರ್ತಮಾನದ ತುರ್ತು. ಇದೇ ಸಂದರ್ಭ ನೀರಿನ ಮಹತ್ವ ಹಾಗೂ ಅದರ ಸದುಪಯೋಗದ ಬಗ್ಗೆ ವಿದ್ಯಾರ್ಥಿಗಳು ಜಾಗೃತಿ ವಹಿಸಬೇಕು ಎಂದರು. ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಶುಭ ಹಾರೈಸಿದರು. ಜಲ ಜಾಗೃತಿ ಅಭಿಯಾನದ ಸಂಯೋಜಕರಾದ ಶರತ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಿ. ಭಟ್ ಕಾರ್ಯಕ್ರಮದ ಕುರಿತು ಆಶಯ ನುಡಿಗಳನ್ನಾಡಿದರು. ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ಸ್ವಾಗತಿಸಿ, ನಿರೂಪಿಸಿದರು.

ಸಹ ಸಂಯೋಜಕಿಯಾದ ಮಾಲತಿ ವಂದಿಸಿದರು. ಅಭಿಯಾನದ ಮುಖ್ಯ ಪ್ರಚಾರಕರಾದ ಕೀರ್ತನ ತೃತೀಯ ಬಿ.ಸಿ.ಎ., ಸುಪ್ರಜ್ ದ್ವಿತೀಯ ಬಿ.ಕಾಂ. (ಬಿ), ಸೌಭಾಗ್ಯ ಕಿಣಿ ತೃತೀಯ ಬಿ.ಕಾಂ. (ಬಿ) ಹಾಗೂ ಸುಜಯ್ ಶೆಟ್ಟಿ ಪ್ರಥಮ ಬಿ.ಕಾಂ. (ಇ), ವಿಭಾಗದ ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ತರಗತಿಗಳಿಗೆ ಜಲ ಜಾಗೃತಿ ತೇರಿನ ಮೂಲಕ ತೆರಳಿ ಜಲ ಜಾಗೃತಿಯ ಅರಿವನ್ನು ಮೂಡಿಸಿದರು. ಇದೇ ಸಂದರ್ಭದಲ್ಲಿ ಜಲ ಜಾಗೃತಿ ತೇರಿನ ತಯಾರಿಯ ಹಿಂದೆ ಶ್ರಮಿಸಿದ ವಿದ್ಯಾರ್ಥಿಗಳಾದ ತೃತೀಯ ಬಿ.ಕಾಂ. (ಬಿ) ಮನೀಷ್, ತೃತೀಯ ಬಿಬಿಎ ಸ್ವಸ್ತಿಕ್, ದ್ವಿತೀಯ ಬಿ.ಕಾಂ. (ಡಿ) ಮದನ್, ದ್ವಿತೀಯ ಬಿ.ಕಾಂ. (ಎ) ಯಶ್ವಂತ್ ಹಾಗೂ ನಿತಿನ್ ಇವರನ್ನು ಗುರುತಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!