Monday, November 25, 2024
Monday, November 25, 2024

ಸಂಶೋಧನೆ ಯೋಜನೆಗಳ ಮೂಲಾಂಶಗಳು: ವಿಶೇಷ ಉಪನ್ಯಾಸ

ಸಂಶೋಧನೆ ಯೋಜನೆಗಳ ಮೂಲಾಂಶಗಳು: ವಿಶೇಷ ಉಪನ್ಯಾಸ

Date:

ತೆಂಕನಿಡಿಯೂರು, ಏ.2: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿಯ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗ, ಸಮಾಜಕಾರ್ಯ ವಿಭಾಗ ಹಾಗೂ ಐಕ್ಯೂಎಸಿ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ‘ಸಂಶೋಧನಾ ಯೋಜನೆಯ ಮೂಲಾಂಶಗಳು’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಎಸ್.ಎಂ.ಎಸ್. ಕಾಲೇಜು ಬ್ರಹ್ಮಾವರ ಇದರ ನಿವೃತ್ತ ಪ್ರಾಂಶುಪಾಲರಾದ ಡಾ. ವೈ. ರವೀಂದ್ರನಾಥ ರಾವ್ ಅವರು ವಿದ್ಯಾರ್ಥಿಗಳಿಗೆ ಸಾಮಾಜಿಕ ಸಂಶೋಧನೆಯ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಅವರು ವಿಶೇಷವಾಗಿ ಸಂಶೋಧನೆ ವಿಷಯದ ಆಯ್ಕೆ ಮತ್ತು ಸಂಶೋಧನಾ ಶೀರ್ಷಿಕೆ ನೀಡುವ ಅಗತ್ಯತೆಗಳನ್ನು ವಿವರಿಸುತ್ತಾ, ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಸಂಗತಿಗಳನ್ನು ಕುತೂಹಲದಿಂದ ಅವಲೋಕಿಸಿದಾಗ ಅವರಿಗೆ ಅಧ್ಯಯನ ವಿಷಯಗಳು ಲಭ್ಯವಾಗುತ್ತವೆ ಎಂದು ತಿಳಿಸಿದರು. ಇದರ ಜೊತೆಗೆ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ವಿಷಯಕ್ಕೆ ಸಂಬಂಧಪಟ್ಟ ಬಗ್ಗೆ ಈಗಾಗಲೇ ಇರುವ ಸಂಬಂಧಪಟ್ಟ ಗ್ರಂಥಗಳನ್ನು ಓದಿಕೊಳ್ಳುವ ಅಗತ್ಯತೆಯನ್ನು ತಿಳಿಸಿದರು. ಸಂಶೋಧನೆಯ ವಸ್ತುನಿಷ್ಠತೆಯ ಬಗ್ಗೆ ಒತ್ತಿ ಹೇಳಿದರು. ಇದರ ಜೊತೆಗೆ ಆಕಾರ ಗ್ರಂಥಗಳ ಪಟ್ಟಿ ನೀಡುವಿಕೆಯ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಸಮಾಜಕಾರ್ಯ ವಿಭಾಗದ ಸಂಯೋಜಕ ಡಾ. ದುಗ್ಗಪ್ಪ ಕಜೆಕಾರ್ ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಘವ ನಾಯ್ಕ್ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯರಾದ ಅಂಕಿತಾ ಪೈ ಕಾರ್ಯಕ್ರಮ ನಿರೂಪಿಸಿದರು. ಮಹೇಶ್ವರಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!