ಮೈಸೂರು, ಏ.2: ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಡಿಮೆ ಇದೆ. ನಾವು ಅಧಿಕಾರಕ್ಕೆ ಬಂದರೆ ಎಸ್.ಸಿ.ಟಿ.ಪಿ / ಟಿ.ಎಸ್.ಪಿ ಮುಂತಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಅವರ ಜತೆಗೂ ಮಾತನಾಡಿ ಪ್ರಣಾಳಿಕೆಯಲ್ಲಿ ಸೇರಿಸಲು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಮಂಗಳವಾರ ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ. ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಲೋಕ ಸಮರ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರಣಕಹಳೆ
ಲೋಕ ಸಮರ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರಣಕಹಳೆ
Date: