ಉಡುಪಿ, ಏ.4: ಚುನಾವಣಾ ಆಯೋಗವು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಿಸಿದ್ದು, ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಯಾವುದೇ ಅರ್ಹ ಮತದಾರರು ಮತದಾನದ ಸಾಂವಿಧಾನಿಕ ಹಕ್ಕಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ, ಮತದಾನ ದಿನದಂದು ಮತದಾನ ಮಾಡಲು ಅನುಕೂಲವಾಗುವಂತೆ ಸಂಘ-ಸಂಸ್ಥೆಗಳಲ್ಲಿ, ವಾಣಿಜ್ಯ ಉದ್ದಿಮೆಗಳಲ್ಲಿ, ಕೈಗಾರಿಕಾ ಘಟಕ ಸೇರಿದಂತೆ ಸಣ್ಣ ಮತ್ತು ದೊಡ್ಡ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕ ಹಾಗೂ ಸಿಬ್ಬಂದಿಗಳಿಗೆ ಮತದಾನದ ದಿನದಂದು ವೇತನ ಸಹಿತ ರಜೆಯನ್ನು ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತದಾನದ ದಿನದಂದು ವೇತನ ಸಹಿತ ರಜೆ
ಮತದಾನದ ದಿನದಂದು ವೇತನ ಸಹಿತ ರಜೆ
Date: