ಕಟಪಾಡಿ, ಏ.10: 2023-24 ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಾಜಕ ಆನಂದತೀರ್ಥ ಪ.ಪೂ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ವಾಣಿಜ್ಯ ವಿಭಾಗದಲ್ಲಿ ಶೇ 100 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ 98 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 64 ವಿದ್ಯಾರ್ಥಿಗಳ ಪೈಕಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 34 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ ಪವನ್ ನಾಯ್ಕ್ ಶೇ 95.5, ಶ್ರೇಯಾ ಜಿ.ವಿ ಶೇ 95.3, ಶರತ್ ವಿಶ್ವನಾಥ್ ಶೇ 94, ತರುಣ್ ಶೇ 93.6, ಅಂಬಿಕಾ ಶೇ 93.16, ಹರ್ಷ ಡಿ.ಕೆ ಶೇ 92.6 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವಿಕಾಸ್ ಟಿ ಶೇ 95, ಸಾಕ್ಷಿಣಿ 93.83, ದೃತಿ ರಾವ್ ಶೇ 93.33, ಶ್ರೇಯಾ ಜಿ.ಆರ್ 93.33, ಪ್ರಣೀತ್. ವಿ ಶೇ 93.16 ಅಂಕ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಎಲ್ಲಾ ಸದಸ್ಯರು, ಪ್ರಾಂಶುಪಾಲ ವಿಜಯ್ ರಾವ್, ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿದ್ದಾರೆ.