ಕಾಪು, ಏ.13: ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದಡಿಯಲ್ಲಿ ರೀಸರ್ಚ್ ಮೆಥಡಾಲಜಿ ಹಾಗೂ ರಿಪೋರ್ಟ ರೈಟಿಂಗ್ ವಿಷಯದ ಮೇಲೆ ಒಂದು ದಿನದ ಕಾರ‍್ಯಗಾರ ನಡೆಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ ಸಹಾಯಕ ಪ್ರಾಧ್ಯಾಪಕ ಡಾ. ಲೋಕೇಶ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಸಂಶೋಧನೆಯ ವಿವಿಧ ಮಜಲುಗಳನ್ನು ಸವಿವರವಾಗಿ ವಿವರಿಸಿ ಸಂಶೋಧನೆಯು ಪ್ರತಿಯೋಬ್ಬರ ಅವಿಭಾಜ್ಯ ಅಂಗವಾಗಿರಬೇಕೆಂದು ತಿಳಿಸಿದರು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ ಗಾಂವ್ಕರ್ ವಹಿಸಿದ್ದರು. ಕಾಲೇಜಿನ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಸಂಯೋಜಕರು ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಸಂಯೋಜಕರಾದ ಡಾ. ನಯನ ಎಲ್. ಎಂ ಕಾರ‍್ಯಕ್ರಮವನ್ನು ಸಂಘಟಿಸಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ದೀಪಿಕಾ ಸುವರ್ಣ, ಆಂಗ್ಲ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಐಕ್ಯೂಎಸಿ ಸಂಯೋಜಕರಾದ ಡಾ.ರೋಶ್ನಿ ಯಶವಂತ್ ಉಪಸ್ಥಿತರಿದ್ದರು. ಪ್ರಥಮ ಎಂ.ಕಾಂ ವಿದ್ಯಾರ್ಥಿನಿ ಸ್ವಸ್ತಿ ಸ್ವಾಗತಿಸಿ, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ರಿಯಾನ ವಂದಿಸಿದರು. ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ರಕ್ಷ ಕಾರ‍್ಯಕ್ರಮ ನಿರೂಪಿಸಿದರು.