ಉಡುಪಿ, ಏ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಇಟ್ಟಮೇರಿ ಮುದ್ದ ಅವರ ಮನೆಯಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್ರವರ ೧೩೩ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ರವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿ ಪುಷ್ಪಾರ್ಚನೆ ಸಲ್ಲಿಸಿ ಮಾಲಾರ್ಪಣೆ ಮಾಡಿ ದೀಪ ಬೆಳಗಿಸುವ ಮೂಲಕ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ರವರ 133ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಹೆಬ್ರಿ ಅಮೃತ ಭಾರತಿ ಕಾಲೇಜಿನ ಉಪನ್ಯಾಸಕರಾದ ವೀಣೇಶ್ ಅಮೀನ್ ಪ್ರಧಾನ ಭಾಷಣ ಮಾಡಿದರು. ಡಾ. ಬಿ. ಆರ್. ಅಂಬೇಡ್ಕರ್ ಅವರಷ್ಟು ಡಿಗ್ರಿ ಪಡೆದವರು ದೇಶದಲ್ಲಿ ಯಾರಿಲ್ಲ, ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅಂಬೇಡ್ಕರ್ ನೀಡಿದ ಕೊಡುಗೆಯನ್ನು ನಾವೆಲ್ಲರೂ ಸ್ಮರಿಸಲೇ ಬೇಕೆಂದರು.
ವೇದಿಕೆಯಲ್ಲಿ ಬೆಳ್ಮಣ್ಣು ಜೇಸಿಐನ ಅಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ, ಬೆಳ್ಮಣ್ಣು ಲಯನ್ಸ್ ಕ್ಲಬ್ ಅಧ್ಯಕ್ಷರಾದ ವಿಶ್ವನಾಥ ಪಾಟ್ಕರ್, ಬೆಳ್ಮಣ್ಣು ರೋಟರಿ ಕ್ಲಬ್ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ, ಮುದ್ದ ಇಟ್ಟಮೇರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಂಬಳ ಓಟಗಾರ ಇರ್ವತ್ತೂರು ಆನಂದ್, ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಸಂಜೀವ ನಡಿಗುತ್ತು, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಪೂರ್ಣಿಮಾ, ಶ್ರಮಜೀವಿಗಳಾದ ಕುಟ್ಟಿ ಇಟ್ಟಮೇರಿ, ಸುಂದರ ಇಟ್ಟಮೇರಿ, ವಿಶೇಷ ಸಾಧನೆಗೈದ ಮುದ್ದ – ವಸಂತಿ ದಂಪತಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಡಿಗುತ್ತು ದುಗುಣಿ ಮತ್ತು ಬಳಗದವರಿಂದ ತುಳುನಾಡ ಪಾಡ್ದನ ಹಾಡು ಹಾಡಿ ಎಲ್ಲರ ಮನಗೆದ್ದರು. ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಪೂರ್ವಾಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಸ್ವಾಗತಿಸಿದರು, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಮತ್ತು ವೀಣಾ ಆಚಾರ್ಯ ಪ್ರಾರ್ಥನೆಗೈದರು, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ವೀಣಾ ಪೂಜಾರಿ ವಂದಿಸಿದರು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಜೊತೆ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಸಸುರೇಶ್ ಅಬ್ಬನಡ್ಕ, ಸುದರ್ಶನ್ ಕುಂದರ್, ಲೀಲಾ ಪೂಜಾರಿ, ಸಂಧ್ಯಾ ಶೆಟ್ಟಿ, ಸುಲೋಚನಾ ಕೋಟ್ಯಾನ್, ಲಲಿತಾ ಆಚಾರ್ಯ, ಕೀರ್ತನ್ ಪೂಜಾರಿ, ಅಶ್ವಿನಿ ಪ್ರಭಾಕರ್, ವೀಣಾ ಆಚಾರ್ಯ, ಅನ್ನಪೂರ್ಣ ಕಾಮತ್, ಪ್ರದೀಪ್ ಸುವರ್ಣ ಕೆಮ್ಮಣ್ಣು ಮೊದಲಾದವರಿದ್ದರು.