ಉಡುಪಿ, ಏ.15: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ 2 ಹಂತದಲ್ಲಿ ಏಪ್ರಿಲ್ 26 ಹಾಗೂ ಮೇ 07 ರಂದು ಚುನಾವಣೆ ನಡೆಯಲಿದೆ. ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕಾಗಿ ಈಗಾಗಲೇ ನಮೂನೆ-12 ರಲ್ಲಿ ಅರ್ಜಿ ಸ್ವೀಕರಿಸಲಾಗಿರುತ್ತದೆ. ಏಪ್ರಿಲ್ 26 ರಂದು ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿಗಳು 3ನೇ ಹಂತದ ಮತದಾನವಿರುವ ಲೋಕಸಭಾ ಕ್ಷೇತ್ರದ ಮತದಾರರಾಗಿದ್ದಲ್ಲಿ ಅಂತಹವರು ಮೇ 7 ರಂದು ಚುನಾವಣಾ ಕರ್ತವ್ಯದ ಮೇಲಿರುವುದಿಲ್ಲ. ಆದ ಕಾರಣ ಸದ್ರಿ ಸಿಬ್ಬಂದಿಗಳು ಅಂಚೆ ಮತದಾನಕ್ಕೆ ಅರ್ಹರಿರುವುದಿಲ್ಲ ಹಾಗೂ ಅಂತಹವರು ಮೇ 7 ರಂದು ತಮ್ಮ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸಬಹುದಾಗಿದೆ. ಅದೇ ರೀತಿ ಮೇ 7 ರಂದು ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳು 2ನೇ ಹಂತದ ಮತದಾನವಿರುವ ಲೋಕಸಭಾ ಕ್ಷೇತ್ರದ ಮತದಾರರಾಗಿದ್ದಲ್ಲಿ, ಏಪ್ರಿಲ್ 26 ರಂದು ನೇರವಾಗಿ ಮತಗಟ್ಟೆಗೆ ತೆರಳಿ ಮತ ಚಲಾಯಿಸುವುದು. ಮತದಾನದ ದಿನವೇ ಚುನಾವಣಾ ಕರ್ತವ್ಯ ನಿರತರಾಗಿದ್ದಲ್ಲಿ ಮಾತ್ರ ಅಂಚೆ ಮತದಾನದ ಸೌಲಭ್ಯವನ್ನು ಪಡೆಯಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತದಾನ ದಿನದಂದು ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಮಾತ್ರ ಅಂಚೆ ಮತದಾನಕ್ಕೆ ಅವಕಾಶ
ಮತದಾನ ದಿನದಂದು ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಮಾತ್ರ ಅಂಚೆ ಮತದಾನಕ್ಕೆ ಅವಕಾಶ
Date: