Tuesday, November 26, 2024
Tuesday, November 26, 2024

ಜಿಲ್ಲಾ ಲಿಯೊ ಅಧ್ಯಕ್ಷೆಯಾಗಿ ಶಾರೋನ್ ಮಾಬೆನ್ ಆಯ್ಕೆ

ಜಿಲ್ಲಾ ಲಿಯೊ ಅಧ್ಯಕ್ಷೆಯಾಗಿ ಶಾರೋನ್ ಮಾಬೆನ್ ಆಯ್ಕೆ

Date:

ಉಡುಪಿ, ಏ.18: ಉಡುಪಿ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಈ 4 ಕಂದಾಯ ಜಿಲ್ಲೆಗಳನ್ನು ಒಳಗೊಂಡ ಲಯನ್ ಜಿಲ್ಲೆ 317C ಯ 2024 -25ನೇ ಸಾಲಿನ ಜಿಲ್ಲಾ ಲಿಯೊ ಅಧ್ಯಕ್ಷೆಯಾಗಿ ಶಾರೋನ್ ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ ಲಯನ್ಸ್ ಜಿಲ್ಲಾ ಗವರ್ನರ್ ಡಾ. ನೇರಿ ಕರ್ನಲಿಯೋ ರವರ ಜಿಲ್ಲಾ ಸಮ್ಮೇಳನದಲ್ಲಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ವಿಖ್ಯಾತ್ ಶೆಟ್ಟಿ, ಖಜಾಂಚಿಯಾಗಿ ಅನಿಕಾ ರೈ ಆಯ್ಕೆಯಾಗಿದ್ದಾರೆ.
ಶರೋನ್ ಪಿಪಿಸಿಯಲ್ಲಿ ಅಂತಿಮ ವರ್ಷದ ಬಿಎ ವಿದ್ಯಾರ್ಥಿನಿ ಮತ್ತು ಅಲೋಶಿಯಸ್ ಇನ್‌ಸ್ಟಿಟ್ಯೂಟ್ ಆಫ್ ಸಿವಿಲ್ ಸರ್ವಿಸ್‌ನಲ್ಲಿ ಓದುತ್ತಿದ್ದಾರೆ.

ಆಲ್ ಕಾಲೇಜ್ ಸ್ಟುಡೆಂಟ್ಸ್ ಅಸೋಶಿಯೇಷನ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಲಿಂಗ ಸಮಾನತೆ ಕ್ಲಬ್ ಕಾರ್ಯದರ್ಶಿಯಾಗಿ, ಭಾರತದ ರಾಷ್ಟ್ರೀಯ ಮಟ್ಟದ ಕಲಾವಿದೆ- 2022 ರಲ್ಲಿ ಗಣರಾಜ್ಯೋತ್ಸವ ಪರೇಡ್, ನವದೆಹಲಿ ಅವರು ಎನ್.ಸಿ.ಸಿ., ಸೇನೆಯ ಮಾಜಿ ಜೆಯುಓ, ರೈಫಲ್ ಡ್ರಿಲ್ ಪ್ರಿ-ಆರ್‌ಡಿಸಿ ಕೆಡೆಟ್, ಬೆಂಗಳೂರು. ಭಾರತೀಯ ಅಂತರಾಷ್ಟ್ರೀಯ ಮಾದರಿ ವಿಶ್ವಸಂಸ್ಥೆಯಲ್ಲಿ ಭಾರತದ ಪ್ರತಿನಿಧಿ, ಉತ್ತಮ ಸಮಾಜ ಸೇವಾ ಮನೋಭಾವನೆಯುಳ್ಳ ಇವರು ತಮ್ಮ ಸೇವಾ ಅವಧಿಯಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲಿ ಸಮಾಜಸೇವಾ ಮನೋಭಾವನೆ ಬೆಳೆಸುವುದರ ಜೊತೆಗೆ ಅವರಲ್ಲಿ ಮಾದಕ ದ್ರವ್ಯಗಳಂತಹ ದುಶ್ಚಟ ಮತ್ತು ರಕ್ತದಾನದ ಬಗ್ಗೆ ಜಾಗೃತಿ ಮೂಡಿಸುವುದು, ಉಡುಪಿಯಲ್ಲಿರುವ ಹೊರ ಜಿಲ್ಲೆಗಳ ಕೂಲಿ ಕಾರ್ಮಿಕರು ವಾಸಿಸುವ ಕೇರಿಗಳಿಗೆ ಹೋಗಿ ಅವರ ಮಕ್ಕಳಲ್ಲಿ ಶಿಕ್ಷಣ ಮತ್ತು ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಲಯನ್ ಜಿಲ್ಲಾ ಮಾಜಿ ಗವರ್ನರ್ ಜಯಕರ ಶೆಟ್ಟಿ ಇಂದ್ರಾಳಿಯವರು ಇವರ ಮಾರ್ಗದರ್ಶಕರಾಗಿರುತ್ತಾರೆ ಎಂದು 2024-25 ನೇ ಸಾಲಿನ ಲಯನ್ಸ್ ಜಿಲ್ಲಾ ಗವರ್ನರ್ ಲ. ಮೊಹಮ್ಮದ್ ಹನೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಅಬ್ಬನಡ್ಕ ಭಜಕೆರೆ ಗಮ್ಮತ್ತ್ದ ಕೆಸರ್ದಗೊಬ್ಬು

ಬೆಳ್ಮಣ್, ನ.26: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಹಾಲಾಡಿ: ಕಾದಂಬರಿ ಲೋಕಾರ್ಪಣೆ

ಕುಂದಾಪುರ, ನ.26: ಹಾಲಾಡಿಯ ಬೆಳಾರ್‌ಮಕ್ಕಿ ಮಂಜುನಾಥ ಕಾಮತ್‌ರವರು ಬರೆದ 'ಕಣ್ತೆರೆದ ಕನಸು'...
error: Content is protected !!