ಉಡುಪಿ, ಏ.22: ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನವು ಏಪ್ರಿಲ್ 26 ರಂದು ನಡೆಯಲಿದೆ. 18 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಮತದಾನ ಮಾಡುವುದು ಸಂವಿಧಾನ ಬದ್ಧ ಹಕ್ಕು ಆಗಿದ್ದು, ಈ ಸಂದರ್ಭದಲ್ಲಿ ಬಲಾಢ್ಯ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕಾಗಿ ಎಲ್ಲ ವಿದ್ಯಾರ್ಥಿಗಳು ಮತದಾನ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಏ. 26 ರಂದು ರಜೆ ಘೋಷಿಸಿರುತ್ತದೆ. ಆದ್ದರಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತರಬೇತಿ ನಡೆಸುತ್ತಿರುವ ಪದವಿಪೂರ್ವ ಶಿಕ್ಷಣ ಸಂಸ್ಥೆಗಳನ್ನು ಮತದಾನ ದಿನದಂದು ಬಂದ್ ಮಾಡಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಮತ ಚಲಾಯಿಸಲು ಅವಕಾಶ ಕಲ್ಪಿಸುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತದಾನ ದಿನದಂದು ತರಬೇತಿ ನಡೆಸುತ್ತಿರುವ ಪದವಿಪೂರ್ವ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲು ಸೂಚನೆ
ಮತದಾನ ದಿನದಂದು ತರಬೇತಿ ನಡೆಸುತ್ತಿರುವ ಪದವಿಪೂರ್ವ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲು ಸೂಚನೆ
Date: