ಉಡುಪಿ, ಮೇ 2: ರಾಷ್ಟ್ರೀಯ ಸೇವಾ ಯೋಜನೆಯು ಯುವ ಶಕ್ತಿಯ ವ್ಯಕ್ತಿತ್ವ ವಿಕಸದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್.ಎಸ್.ಎಸ್ ಮಹತ್ವದ ಪಾತ್ರ ವಹಿಸುತ್ತದೆ ಎಂದು ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು. ಅವರು ನಗರದ ಬ್ರಹ್ಮಗಿರಿಯ ರೆಡ್ಕ್ರಾಸ್ ಭವನದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಉಡುಪಿಯ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ಇವರ ಆಶ್ರಯದಲ್ಲಿ ನಡೆಯುತ್ತಿರುವ ಉಡುಪಿಯ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು. ಕಾಲೇಜು ಪ್ರಾಂಶುಪಾಲ ಡಾ. ದೇವಿಪ್ರಸಾದ್ ಎಸ್ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಣಿಪಾಲ ಆಕಾಡೆಮಿ ಆಫ್ ಜನರಲ್ ಎಜುಕೇಶನ್ನ ಕಾರ್ಯದರ್ಶಿ ಬಿ.ಪಿ. ವರದರಾಯ್ ಪೈ, ಕಾಲೇಜಿನ ಕಂಪ್ಯೂಟರ್ ಸೈನ್ಸ್ ಡಿಪಾರ್ಟ್ಮೆಂಟ್ನ ಪ್ರೋ. ಡಾ. ಎಮ್. ವಿಶ್ವನಾಥ ಪೈ, ರೆಡ್ಕ್ರಾಸ್ ಗೌರವ ಕಾರ್ಯದರ್ಶಿ ಡಾ. ಗಣನಾಥ್ ಶೆಟ್ಟಿ, ಶಿಬಿರದ ಸಂಯೋಜಕರಾದ ದೀಪಿಕಾ ಮತ್ತು ಸನತ್ ಕೋಟ್ಯಾನ್ ಉಪಸ್ಥಿತರಿದ್ದರು. ಅಂಜಲಿ ಸ್ವಾಗತಿಸಿ, ಶ್ರೀಕರ್ ನಿರೂಪಿಸಿ, ಸ್ವಾತಿ ವಂದಿಸಿದರು.
ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್.ಎಸ್.ಎಸ್ ಪಾತ್ರ ಮಹತ್ವ
ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್.ಎಸ್.ಎಸ್ ಪಾತ್ರ ಮಹತ್ವ
Date: