ಉಡುಪಿ, ಮೇ 7: ಕೌಶಲ್ಯಗಳು ಮನುಷ್ಯನನ್ನು ಬದುಕಿನುದ್ದಕ್ಕೂ ರಕ್ಷಿಸುತ್ತದೆ. ಅದರಲ್ಲೂ ಮೃದು ಕೌಶಲ್ಯಗಳು ಇಂದಿನ ಜೀವನದಲ್ಲಿ ಅತೀ ಅಗತ್ಯವಾಗಿದೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಈ ಕೌಶಲ್ಯಗಳನ್ನು ಕಲಿಸುತ್ತದೆ ಎಂದು ನಿವೃತ್ತ ರಾಜ್ಯ ಎನ್. ಎಸ್. ಎಸ್ ಅಧಿಕಾರಿ ಮತ್ತು ಸರಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು. ಅವರು ಮಂಗಳವಾರ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಎಂ.ಜಿ.ಎಮ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್, ಡಾ. ಪ್ರಸಾದ್ ರಾವ್ ಎಂ, ಡಾ. ನಿಕೇತನ, ಡಾ. ಕೀರ್ತಿ ಮತ್ತು ಪ್ರೊ.ಸುರೇಂದ್ರ ಶೆಟ್ಟಿ ಕೊಕ್ಕರ್ಣೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ, ಎಂ.ಜಿ.ಎಮ್. ಕಾಲೇಜಿನ ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಟಿ. ರಂಗ ಪೈ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿ ಬೀಚ್ ಸ್ವಚ್ಛತೆ, ಸ್ವಚ್ಛತಾ ಕಾರ್ಯಕ್ರಮ ಹಾಗೂ ವಿವಿಧ ಶ್ರಮದಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ದೀಕ್ಷಿತಾ ಸ್ವಾಗತಿಸಿ, ಪ್ರಣತಿ ನಿರೂಪಿಸಿ, ರಕ್ಷಿತಾ ವಂದಿಸಿದರು.
ಮೃದು ಕೌಶಲ್ಯಗಳು ಬದುಕಿಗೆ ಅಗತ್ಯ: ಡಾ. ಗಣನಾಥ ಎಕ್ಕಾರು
ಮೃದು ಕೌಶಲ್ಯಗಳು ಬದುಕಿಗೆ ಅಗತ್ಯ: ಡಾ. ಗಣನಾಥ ಎಕ್ಕಾರು
Date: