Monday, November 25, 2024
Monday, November 25, 2024

ಮಕ್ಕಳು ನಮ್ಮ ನಡೆಯನ್ನು ಗಮನಿಸುತ್ತಾರೆ ಎಂಬ ಎಚ್ಚರ ಪೋಷಕರಲ್ಲಿರಬೇಕು: ಡಾ.ಕಾರಂತ

ಮಕ್ಕಳು ನಮ್ಮ ನಡೆಯನ್ನು ಗಮನಿಸುತ್ತಾರೆ ಎಂಬ ಎಚ್ಚರ ಪೋಷಕರಲ್ಲಿರಬೇಕು: ಡಾ.ಕಾರಂತ

Date:

ಕೋಟ, ಮೇ 9: ಸಂಸ್ಕಾರಯುತ ನಡವಳಿಕೆಯು ಮನೆಯಿಂದಲೇ, ಅದರಲ್ಲೂ ಹೆತ್ತವರಿಂದಲೇ ದೊರಕಬೇಕಾದದ್ದು ಇಂದಿನ ಸಂಕೀರ್ಣ ಕಾಲಘಟ್ಟದಲ್ಲಿ ಅತ್ಯಂತ ಅವಶ್ಯಕವಾಗಿದ್ದು, ಮಕ್ಕಳು ನಮ್ಮ ಮಾತನ್ನು ಕೇಳುವುದಿಲ್ಲವೆಂದು ದೂರುವ ಬದಲು ಅವರು ನಮ್ಮನ್ನು ಗಮನಿಸುತ್ತಾರೆಂಬ ಅರಿವು ಇರಬೇಕೆಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಹೇಳಿದರು. ಗುರುವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಜ್ಞಾನಮಂದಿರದಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆಯ ಸಹಕಾರದೊಂದಿಗೆ ಹಮ್ಮಿಕೊಂಡಿರುವ ೨೪ ನೇ ವರ್ಷದ ವಸಂತ ವೇದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಔಪಚಾರಿಕ ಶಿಕ್ಷಣವು ಪರಿಣಾಮಕಾರಿಯಾಗಬೇಕಂದಲ್ಲಿ ಬದುಕಿನ ಕೌಶಲವನ್ನು ಅಳವಡಿಸಬೇಕಾಗಿದ್ದು, ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ವೇದ ಶಿಬಿರಗಳು ಈ ನಿಟ್ಟಿನಲ್ಲಿ ಪೂರಕ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸಬಲ್ಲದು ಎಂದು ಅಭಿಪ್ರಾಯಪಟ್ಟರು.

ಶ್ರೀ ದೇವಳದ ಆಡಳಿತ ಮಂಡಳಿಯ ಕೋಶಾಧಿಕಾರಿ ಪರಶುರಾಮ ಭಟ್ಟ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಸದಾಶಿವ ಐತಾಳ, ಕೂಟಮಹಾಜಗತ್ತು ಕೇಂದ್ರ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಕೆ.ತಾರಾನಾಥ ಹೊಳ್ಳ, ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸಂಸ್ಥೆಯ ಅಧ್ಯಕ್ಷ ಶ್ರೀಪತಿ ಅಧಿಕಾರಿ, ಗುರುಗಳಾದ ವಾದಿರಾಜ ಐತಾಳ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ದೇವಳದ ಗಣೇಶ ಭಟ್ಟ, ವ್ಯವಸ್ಥಾಪಕ ನಾಗರಾಜ ಹಂದೆ. ಕೂ.ಮ.ಜ ಸಾಲಿಗ್ರಾಮ ಅಂಗಸಂಸ್ಥೆಯ ಚಿದಾನಂದ ತುಂಗ, ಕೇಂದ್ರ ಸಂಸ್ಥೆಯ ಮಾಜಿ ಕಾರ್ಯದರ್ಶಿ ಮಂಜುನಾಥ ಉಪಾಧ್ಯ, ಕೂ.ಮ.ಜ. ಸಾಲಿಗ್ರಾಮ ಅಂಗ ಸಂಸ್ಥೆಯ ಮಹಾಬಲ ಹೇರ್ಳೆ ಶಿಬಿರಕ್ಕೆ ಸಹಕರಿಸಿದರು. ೩೫೦ ಕ್ಕೂ ಹೆಚ್ಚು ವಿಪ್ರ ವಟುಗಳು ವಸಂತ ವೇದ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಶ್ರೀ ದೇವಳದ ಕಾರ್ಯದರ್ಶಿ ಲಕ್ಷ್ಮಿನಾರಾಯಣ ತುಂಗ ವಂದಿಸಿದರು. ಅಖಿಲೇಶ್ ಐತಾಳ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!