ಬಿದ್ಕಲ್ಕಟ್ಟೆ, ಮೇ 12: ಕಳೆದ 8 ವರ್ಷಗಳಿಂದ ಮನೆಯಿಲ್ಲದೆ ಸಣ್ಣ ಜೋಪಡಿಯಲ್ಲಿ ವಾಸವಾಗಿದ್ದ ರಾಮ ಮತ್ತು ಮಗಳಾದ ಸುಮತಿಯವರಿಗೆ ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ ಇದರ ವತಿಯಿಂದ ನಿರ್ಮಿಸಲಾದ ರಾಮ ನಿಲಯ ನೂತನ ಮನೆಯ ಉದ್ಘಾಟನೆ ಭಾನುವಾರ ನಡೆಯಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥರಾದ ಅರ್ಜುನ್ ಭಂಡಾರ್ಕಾರ್, ಈ ರೀತಿ ಸಮಾಜದಲ್ಲಿ ಯಾವುದೇ ಮೂಲಭೂತ ಸೌಕರ್ಯವಿಲ್ಲದೆ ಸಮಾಜದ ಮುಖ್ಯವಾಹಿನಿಗೆ ಬರಲಾಗದೆ ಕಷ್ಟಪಡುವವರನ್ನು ಗುರುತಿಸಿ ಸೇವೆ ಮಾಡುವುದು ಇಂದಿನ ಅಗತ್ಯವಾಗಿದೆ. ಮುಂದಿನ ದಿನಗಳಲ್ಲಿ 200 ಕುಟುಂಬಗಳಿಗೆ ಸಹಾಯಧನ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದರು.
ಹೋಂ ಡಾಕ್ಟರ್ ಫೌಂಡೇಶನ್ ನ ಮುಖ್ಯಸ್ಥರಾದ ಡಾ. ಶಶಿಕಿರಣ್ ಶೆಟ್ಟಿ ಸಂಸ್ಥೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಬಡ ಪ್ರತಿಭಾನ್ವಿತ ವಿದ್ಯಾರ್ಥಿನಿಯ ಶಾಲಾ ಶುಲ್ಕ ಸೇರಿದಂತೆ ವಿವಿಧ ಸಹಾಯಧನ ನೀಡಲಾಯಿತು. ಡಾ. ಸುಮಾ ಎಸ್ ಶೆಟ್ಟಿ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಭಾಗ್ಯಶ್ರೀ ಭಂಡಾರ್ಕರ್, ರಾಘವೇಂದ್ರ ಪೂಜಾರಿ, ಬಂಗಾರಪ್ಪ, ಉದಯ ನಾಯ್ಕ್, ರಾಘವೇಂದ್ರ ಪ್ರಭು ಕರ್ವಾಲು, ಸುಜಯ ಶೆಟ್ಟಿ, ಸ್ವರೂಪ ಹೆಗ್ಡೆ ಕಿಶೋರ್ ಶೆಟ್ಟಿ, ರಾಮು ಸುಮತಿ ಹಾಗೂ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು.