Thursday, September 19, 2024
Thursday, September 19, 2024

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

Date:

ವಾರಣಾಸಿ, ಮೇ 14: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದಿಂದ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಸಾರ್ವತ್ರಿಕ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದಲ್ಲಿ ವಾರಣಾಸಿಯಲ್ಲಿ ಮತದಾನ ನಡೆಯಲಿದ್ದು, ಈ ಹಂತದ ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದೆ. ಪ್ರಧಾನಿಯವರು ಮೊದಲು ಗಂಗೆಯಲ್ಲಿ ಸ್ನಾನ ಮಾಡಿ, ಗಂಗಾ ಆರತಿ ನಡೆಸಿ ನಂತರ ಕಾಶಿಯ ಕಾಲಭೈರವನ ಆಶೀರ್ವಾದ ಪಡೆದ ನಂತರ ನಾಮನಿರ್ದೇಶನ ಪ್ರಕ್ರಿಯೆಗೆ ಮುಂದಾದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎನ್.ಡಿ.ಎ ಮೈತ್ರಿಕೂಟದ ನಾಯಕರಾದ ಚಂದ್ರಬಾಬು ನಾಯ್ಡು, ಏಕನಾಥ್ ಶಿಂಧೆ, ಜಿತನ್ ರಾಮ್ ಮಾಂಝಿ, ಸಂಜಯ್ ನಿಶಾದ್, ರಾಮದಾಸ್ ಅಠವಳೆ ಸೇರಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಾಜನಾಥ್ ಸಿಂಗ್, ಹರ್ದೀಪ್ ಸಿಂಗ್ ಪುರಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.

ಪ್ರತಿಪಕ್ಷ ಇಂಡಿ ಮೈತ್ರಿಕೂಟದ ಜಂಟಿ ಅಭ್ಯರ್ಥಿಯಾಗಿರುವ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರು ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಅವರು ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದರು. ಆದರೆ ಅವರು ಎರಡೂ ಬಾರಿ ಮೂರನೇ ಸ್ಥಾನ ಗಳಿಸಿದ್ದರು. 2019 ರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜವಾದಿ ಪಕ್ಷದ ಶಾಲಿನಿ ಯಾದವ್ ಅವರನ್ನು 4.79 ಲಕ್ಷ ಮತಗಳಿಂದ ಸೋಲಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!