ಬೆಂಗಳೂರು, ಮೇ 16: ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೆರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದು ಹೇಳಿದ್ದಾರೆ.