Friday, September 20, 2024
Friday, September 20, 2024

ಉಡುಪಿ: ವಿವಿಧ ತಳಿಯ ತಾಜಾ ಮಾವಿನ ಹಣ್ಣುಗಳು ಮಾವಿನ ಮೇಳದಲ್ಲಿ

ಉಡುಪಿ: ವಿವಿಧ ತಳಿಯ ತಾಜಾ ಮಾವಿನ ಹಣ್ಣುಗಳು ಮಾವಿನ ಮೇಳದಲ್ಲಿ

Date:

ಉಡುಪಿ, ಮೇ 16: ಜನಸಾಮಾನ್ಯರ ಬಾಯಲ್ಲಿ ನಿರೂರಿಸುವ ದೇಹಕ್ಕೆ ಪೌಷ್ಠಿಕತೆ ಒದಗಿಸುವ ಹಣ್ಣುಗಳ ರಾಜನೆಂದು ಪ್ರಸಿದ್ಧಿ ಪಡೆದಿರುವ ವಿವಿಧ ಬಗೆಯ ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉಡುಪಿ ನಗರದ ದೊಡ್ಡಣ್ಣಗುಡ್ಡೆ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಮನಗರ ಜಿಲ್ಲೆ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ 20 ಕ್ಕೂ ಹೆಚ್ಚು ಮಾವಿನ ತಳಿಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮೇ 16 ರಿಂದ 19 ರವರೆಗೆ ನಡೆಯಲಿದೆ ಮೇಳದಲ್ಲಿ 20ಕ್ಕೂ ಅಧಿಕ ಮಳಿಗೆಯನ್ನು ತೆರೆಯಲಾಗಿದೆ. ರಾಮನಗರ ಜಿಲ್ಲೆಯ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ (ಶುಗರ್‌ಬೇಬಿ), ಬೈಗಂಪಲ್ಲಿ, ರತ್ನಗಿರಿ, ಆಲ್ಪೋನ್‌ಸ್ ಸಹಿತ ನಾನ ತಳಿಯ ಒಟ್ಟು 40 ಟನ್‌ಗೂ ಹೆಚ್ಚು ಮಾವು ಮೇಳದಲ್ಲಿ ಲಭ್ಯವಿದೆ. ಮಾವು ಮೇಳದಲ್ಲಿ ಸಕ್ಕರೆಗುತ್ತಿ ಮಾವು ವಿಶೇಷ ಆಕರ್ಷಣೆಯಾಗಿದ್ದು, ಕೆಜಿಗೆ 300 ದರವಿದ್ದು ತೋತಾಪುರಿ ಕೆ.ಜಿಗೆ 50 ರೂ ಕನಿಷ್ಠ ದರದಾದ್ದರೆ, ಹಿಮಮ್ ಪಸಂದ್ ತಳಿಯು ಕೆ.ಜಿ ಯೊಂದಕ್ಕೆ 400 ರೂ ಇದ್ದು ಗರಿಷ್ಠ ತಳಿಯದ್ದಾಗಿದೆ.

ಮಾವು ಮೇಳ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಮಾತನಾಡಿ, ಮಾವು ಮೇಳದಲ್ಲಿ ರೈತರು ನೇರವಾಗಿ ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ಕಲ್ಪಿಸಲಾಗಿದೆ. ಇಲ್ಲಿ ಮಾರಾಟ ವಾಗುತ್ತಿರುವ ಮಾವು ಸಾವಾಯವ ಪದ್ದತಿಯಲ್ಲಿ ಬೆಳೆದಾಗಿದ್ದು ರಾಸಾಯನಿಕಗಳನ್ನು ಬಳಕೆ ಮಾಡದೇ ಮಾಗಿಸಿ ಮಾವನ್ನು ಹಣ್ಣು ಮಾಡಲಾಗಿರುವ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತಿದೆ ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕೆಂದರು ಎಂದರು.

ರೈತರು ತಾವು ಬೆಳೆದ ಮಾವನ್ನು ನೇರವಾಗಿ ಮಾರಾಟ ಮಾಡಲು ಮಾವು ಮೇಳವು ಒಂದು ಉತ್ತಮ ವೇದಿಕೆಯಾಗಿದೆ ಎಂದ ಅವರು ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸುವ ನಿಟ್ಟಿನಲ್ಲಿ ಸರಕಾರ ಫಾರ್ಮೆರ್ ಫ್ರೋಡ್ಯೂಸರ್ ಒರ್ಗನೈಸೆಷನ್ ಮೂಲಕ, ರೈತರಿಗೆ ಆಗುವಂತಹ ನಷ್ಟವನ್ನು ತಪ್ಪಿಸಿ ಸ್ವತಹ ಅವರೇ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡಿ ಲಾಭ ಗಳಿಸುವ ಉದ್ದೇಶ ಇದೆ ಎಂದರು. ಕಾರ್ಯಕ್ರಮದಲ್ಲಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮಾವು ಮೇಳದಲ್ಲಿ ಸಾರ್ವಜನಿಕರು ಪಾಲ್ಗೊಂಡು ತಮಗೆ ಇಷ್ಟವಾದ ಮಾವಿನ ತಳಿಯ ಖರೀದಿಯ ಭರಟೆಯಲ್ಲಿದ್ದರು. ಖರೀದಿಗೂ ಮುನ್ನ ವಿವಿಧ ಮಾವಿನ ಹಣ್ಣುಗಳ ರುಚಿಯನ್ನು ಸವಿದಿದ್ದು ವಿಶೇಷವಾಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!