ಕೋಟ, ಮೇ 21: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಮತ್ತು ಯುವ ರೆಡ್ಕ್ರಾಸ್ ಘಟಕದ ವತಿಯಿಂದ ಕುಂದಾಪುರದ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಕುಂದಾಪುರದ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ರೆಡ್ಕ್ರಾಸ್ ಸಂಸ್ಥೆ ಮಾಡುತ್ತಿರುವ ಸಾಮಾಜಿಕ ಸೇವೆಗಳ ಬಗ್ಗೆ ಹಾಗೂ ರಕ್ತದಾನದ ಮಹತ್ವವನ್ನು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುನೀತ ವಿ ರಕ್ತದಾನದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಬಿಟ್ಟು ರಕ್ತದಾನ ಮಾಡಿ ಜೀವ ಉಳಿಸಿ ಇತರರನ್ನು ಪ್ರೇರೇಪಿಸಿ ಎಂದು ಕರೆ ನೀಡಿದರು. ಯುವ ರೆಡ್ಕ್ರಾಸ್ ಘಟಕದ ಸಂಚಾಲಕರಾದ ರಾಜಣ್ಣ ಎಂ ಕಾರ್ಯಕ್ರಮ ಸಂಘಟಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶಂಕರ ನಾಯ್ಕ ಬಿ್ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮುರಳಿ ಎಂ.ಜಿ ಉಪಸ್ಥಿತರಿದ್ದರು.