Sunday, November 24, 2024
Sunday, November 24, 2024

‘ಮನೆಯೇ ಗ್ರಂಥಾಲಯ’ ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ

‘ಮನೆಯೇ ಗ್ರಂಥಾಲಯ’ ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ

Date:

ಉಡುಪಿ, ಮೇ 22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ‘ಮನೆಯೇ ಗ್ರಂಥಾಲಯ’ ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ವಿದ್ವಾಂಸ ನಾಡೋಜ ಡಾ. ಕೆ .ಪಿ .ರಾವ್ ಅವರು ಉಡುಪಿಯ ಬೈಲೂರಿನಲ್ಲಿರುವ ರಂಗ ಕಲಾವಿದರಾದ ಶಶಿಪ್ರಭಾ ಹಾಗೂ ವಿವೇಕಾನಂದ ದಂಪತಿಗಳ ಮನೆ ‘ವಾಟಿಕಾ’ದಲ್ಲಿ ಚಾಲನೆ ನೀಡಿದರು.
ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಎನ್ನುವಂತದ್ದು ಇವತ್ತಿನ ಆಧುನಿಕ ಸಂದರ್ಭದಲ್ಲಿ ಎಲ್ಲಾ ಸಾಧ್ಯತೆಗಳನ್ನು ಇಟ್ಟುಕೊಂಡು ಬೆಳೆಯುತ್ತಿದೆ. ಆದರೆ ಅನೇಕ ಶತಮಾನಗಳ ಹಿಂದೆ ನಾವು ಕಂಡುಕೊಂಡ ಮುದ್ರಣ ಮಾಧ್ಯಮದ ಆವಿಷ್ಕಾರದಿಂದಾಗಿ ಗಳಿಸಿದ ಜ್ಞಾನ ಸಂಪತ್ತನ್ನು ಅಕ್ಷರರೂಪವಾಗಿ ಪರಿವರ್ತಿಸಿ, ಮುಂದೆ ಅವುಗಳನ್ನು ಮುದ್ರಣ ರೂಪದಲ್ಲಿ ದಾಖಲೀಕರಣ ಗೊಳಿಸಿರುವುದರ ಪರಿಣಾಮವಾಗಿ ನಮಗಿಂದು ಕೋಟಿ ಕೋಟಿ ಗ್ರಂಥಗಳು ನಮ್ಮ ಅಧ್ಯಯನಕ್ಕೆ ಸಾಧ್ಯವಾಗಿವೆ, ಮುಂದೆಯೂ ಇವು ಸಾಧ್ಯವಾಗುತ್ತವೆ. ಅಷ್ಟು ಮಾತ್ರವಲ್ಲ ಒಂದು ಗ್ರಂಥವನ್ನು ತೆರೆದು ಅದರೊಳಗಿನ ಒಂದು ಪುಟದ ಸುವಾಸನೆಯನ್ನು ಗಮನಿಸಿದಾಗ ಅಲ್ಲಿ ಸಿಗುವ ಆನಂದವೇ ಬೇರೆ ಆಗಿರುತ್ತದೆ ಅದನ್ನು ಪದಗಳಲ್ಲಿ ಕಟ್ಟಿಕೊಡಲು ಸಾಧ್ಯವಿಲ್ಲ. ಅಂತಹ ಅನುಭವವನ್ನು ಗ್ರಂಥಗಳನ್ನು ಸ್ಪರ್ಶಿಸುವುದರಿಂದ ಆಗುವುದೇ ಹೊರತು ಬೇರೆ ಯಾವುದರಿಂದಲೂ ಆಗುವುದಿಲ್ಲ ಎಂದು ನಾಡೋಜ ಕೆ. ಪಿ. ರಾವ್ ಅಭಿಪ್ರಾಯಪಟ್ಟರು.

ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಆಶಯ ನುಡಿಗಳನ್ನಾಡುತ್ತಾ, ಇದೊಂದು ವಿನೂತನ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಉಡುಪಿ ತಾಲೂಕಿನ ಮನೆ ಮಂದಿರಗಳಲ್ಲಿ ಆಸ್ಪತ್ರೆಗಳಲ್ಲಿ ಅಂಗಡಿಗಳಲ್ಲಿ ಗ್ರಂಥಾಲಯ ಪ್ರಾರಂಭಿಸುತ್ತೇವೆ. ಈ ಮೂಲಕ ಓದುವ ಹವ್ಯಾಸ ಬೆಳೆಸಲು ಪ್ರಯತ್ನಿಸಲಾಗುವುದು ಎಂದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ, ಜಿಲ್ಲಾ ಕಸಾಪ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಜಿಲ್ಲಾ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ, ತಾಲೂಕು ಗೌರವ ಕಾರ್ಯದರ್ಶಿ ರಂಜಿನಿ ವಸಂತ್ ಉಪಸ್ಥಿತರಿದ್ದರು.
ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಸ್ವಾಗತಿಸಿ, ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ ಧನ್ಯವಾದ ನೀಡಿದರು. ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...
error: Content is protected !!