Saturday, October 26, 2024
Saturday, October 26, 2024

ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‌ಪಾಲ್ ಎ ಸುವರ್ಣ

ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‌ಪಾಲ್ ಎ ಸುವರ್ಣ

Date:

ಉಡುಪಿ, ಮೇ 28: ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ. ಬ್ಯಾಂಕಿನ ಸದಸ್ಯರ ಮಕ್ಕಳು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 90, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 85 ಹಾಗೂ 2023 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.80 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 75 ಅಂಕ ಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಸಾಮಾನ್ಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 95, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 90 ಹಾಗೂ 2023ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇಕಡಾ 85 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇಕಡಾ 80 ಅಂಕ ಪಡೆದಿರಬೇಕು. ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮಿ ಕೋ-ಓಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆ ಹಾಗೂ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ http://www.mahalakshmicoopbank.com ನಲ್ಲಿ ಜೂನ್ 5 ರಿಂದ ಲಭ್ಯವಿದ್ದು, ದಿನಾಂಕ: 15-07- 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಬ್ಯಾಂಕಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (25-10-2024) ಚಿನ್ನದ ದರ

Gold 22 CT- Rs. 7295 Gold 24 CT- Rs. 7808 Silver-...

ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು

ಉಡುಪಿ, ಅ.25: ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು...

ತ್ಯಾಜ್ಯ ನಿರ್ವಹಣೆಯಲ್ಲಿ ನಗರಸಭೆಯೊಂದಿಗೆ ಸಹಕರಿಸಿ

ಉಡುಪಿ, ಅ.25: ಉಡುಪಿ ನಗರಸಭೆಯು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿವಿಧ...

ಕಟ್ಟಡಗಳ ಭಗ್ನ ಅವಶೇಷಗಳನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಲು ಸೂಚನೆ

ಉಡುಪಿ, ಅ.25: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಎಲ್ಲೆಂದರಲ್ಲಿ...
error: Content is protected !!