Monday, November 25, 2024
Monday, November 25, 2024

ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Date:

ಉಡುಪಿ, ಮೇ 28: ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ. ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!