ಮಲ್ಪೆ, ಮೇ 30: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಂಡಿರುವ ಡಿಜಿಟಲ್ ಗ್ರಂಥಾಲಯವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಡಿಜಿಟಲ್ ಗ್ರಂಥಾಲಯವು ಇಂದಿನ ಸ್ಪರ್ಧಾತ್ಮಕ ಕಾಲಘಟ್ಟಕ್ಕೆ ಅತ್ಯಮೂಲ್ಯವಾಗಿದ್ದು, ಇದು ೩೦೦೦ ಕ್ಕೂ ಹೆಚ್ಚಿನ ಕಲಿಕಾ ಪುಸ್ತಕಗಳು, ೧೦೦ಕ್ಕೂ ಅಧಿಕ ಮ್ಯಾಗಝಿನ್‌ಗಳು ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಅನುಕೂಲವಾಗುವ ಪುಸ್ತಕಗಳನ್ನು ಒಳಗೊಂಡಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಎಡ್ವೆಸ್ ಸಂಸ್ಥಾಪಕ ಧೀರಜ್ ಮಂಗಳೂರು, ಗ್ರಂಥಪಾಲರಾದ ಕೃಷ್ಣ ಸಾಸ್ತಾನ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಾಧಾಕೃಷ್ಣ ಹಾಗೂ ಡಾ. ರಾಘವ ನಾಯ್ಕ, ಶೈಕಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ., ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ ಹಾಗೂ ಬೋಧಕ, ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ ಎನ್. ಕಾರ್ಯಕ್ರಮ ನಿರೂಪಿಸಿದರು.
ತೆಂಕನಿಡಿಯೂರು ಕಾಲೇಜು: ನೂತನ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ
ತೆಂಕನಿಡಿಯೂರು ಕಾಲೇಜು: ನೂತನ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ
Date: