Friday, October 25, 2024
Friday, October 25, 2024

ಜೂನ್‌ 3: ಪದವೀಧರ, ಶಿಕ್ಷಕರ ಕ್ಷೇತ್ರ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ

ಜೂನ್‌ 3: ಪದವೀಧರ, ಶಿಕ್ಷಕರ ಕ್ಷೇತ್ರ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ

Date:

ಬೆಂಗಳೂರು, ಮೇ 30: ಜೂನ್‌ 3ರಂದು ನಡೆಯುವ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಕಾರಣ ಅರ್ಹ ಮತದಾರರಿಗಷ್ಟೇ ಸೀಮಿತವಾಗಿ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಶಾನ್ಯ ಪದವೀಧರರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ, ಬೆಂಗಳೂರು ಪದವೀಧರರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಕ್ಷೇತ್ರದ ವ್ಯಾಪ್ತಿಗೆ ಬರುವ ಜಿಲ್ಲೆಗಳಲ್ಲಿನ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ.

ಇಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ನೀಡುವಂತೆ ನಿರ್ದೇಶನ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಲಕ್ಷ್ಮಣ ಕುಡ್ವ ಪಿ. ಇವರಿಗೆ ಪಿ.ಎಚ್‌ಡಿ

ಉಡುಪಿ, ಅ.25: ಲಕ್ಷ್ಮಣ ಕುಡ್ವ ಪಿ. ಅವರು ಡಾ. ಗೋಪಿನಾಥ ನಾಯಕ್...

ಗೀತಾ ಯೋಗ ಸಂಗಮ: ಪುತ್ತಿಗೆ ಶ್ರೀ

ಉಡುಪಿ, ಅ.25: ಭಗವದ್ಗೀತೆಯಲ್ಲಿ‌ ಕೃಷ್ಣ ಹೇಳಿದ ಯೋಗಸೂತ್ರಗಳನ್ನು ಅರ್ಜುನನಂತೆ ಬಾಬಾ ರಾಮ್...

ಸಂಶೋಧನೆ ಶ್ರಮದ ಫಲ: ಡಾ ಭಟ್

ಮೂಡುಬಿದಿರೆ, ಅ.25: ಸಂಶೋಧನೆ ಮಾನಸಿಕ ಸದೃಢತೆ, ಶ್ರಮ, ಅಧ್ಯಯನ, ತರ್ಕ, ತಾರ್ಕಿಕ...

ಅ.26: ಸ್ವಯಂಪ್ರೇರಿತ ರಕ್ತದಾನ ಶಿಬಿರ

ಉಡುಪಿ, ಅ.24: ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ರೆಡ್‌ಕ್ರಾಸ್ ಮತ್ತು ರಾಷ್ಟ್ರೀಯ...
error: Content is protected !!