ಕೋಟ, ಜೂ.2: ಗೀತಾನಂದ ಫೌಂಡೇಶನ್ ಮಣೂರು ಕೋಟ ಇವರ ಆಶ್ರಯದಲ್ಲಿ ಉಚಿತ ನೋಟ್ ಬುಕ್ ಪುಸ್ತಕ, ವಿದ್ಯಾರ್ಥಿವೇತನ ಕಂಪ್ಯೂಟರ್, ಬಸ್ ಮತ್ತು ಸ್ಯಾನಿಟರಿ ನ್ಯಾಪ್ ಕಿನ್ ಬರ್ನರ್ ಹಸ್ತಾಂತರ, ಸಸಿ ವಿತರಣೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ಆನಂದೋತ್ಸವ ೨೦೨೪ ಕಾರ್ಯಕ್ರಮ ಕೆ.ಸಿ ಕುಂದರ್ ಸಭಾಂಗಣದಲ್ಲಿ ನಡೆಯಿತು. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ನಾಡೋಜ ಜಿ.ಶಂಕರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಗೀತಾನಂದ ಟ್ರಸ್ಟ್ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅಲ್ಲದೆ ಸಾಕಷ್ಟು ಸಾಮಾಜಿಕ ಸೇವೆಗಳನ್ನು ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು. ಮೊಗವೀರ ಯುವ ಸಂಘ ಉಡುಪಿ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಸಮವಸ್ತ್ರವನ್ನು ಹಸ್ತಾಂತರಿಸಿದರು.
ವಿವಿಧ ಶಾಲೆಗಳಿಗೆ ಕಂಪ್ಯೂಟರ್ ಗಳನ್ನು ಕೋಟತಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಮಣೂರು ಶಾಲೆಗೆ, ಕೋಟ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಹೆಸ್ಕತ್ತೂರ್ ಶಾಲೆ, ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಡಾ.ಕೆ ಕೃಷ್ಣ ಕಾಂಚನ್ ಕೋಟತಟ್ಟು ಗ್ರಾಮ ಪಂಚಾಯತ್ ಗೆ ಕಂಪ್ಯೂಟರ್ ಅನ್ನು ಹಸ್ತಾಂತರಿಸಿದರು. ಶಾಲಾ ಬಸ್ ಅನ್ನು ಮತ್ಸ್ಯೋದ್ಯಮಿ ಆನಂದ್ ಸುವರ್ಣ ಮಲ್ಪೆ ಹಾಗೂ ಕರ್ಣಾಟಕ ಬ್ಯಾಂಕ್ ಒಂದೊಂದು ಬಸ್ ಗಳನ್ನು ನೀಡಿದ್ದು ಅದನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಲಾಯಿತು. ಇದೇ ವೇಳೆ ಆನಂದ್ ಸುವರ್ಣ ಹಾಗೂ ಕರ್ಣಾಟಕ ಬ್ಯಾಂಕ್ ಎಜಿಎಮ್ ವಾದಿರಾಜ್.ಕೆ ಇವರುಗಳನ್ನು ಸನ್ಮಾನಿಸಲಾಯಿತು.
ಸುಮಾರು 35 ಲಕ್ಷ ರೂ ವೆಚ್ಚದಲ್ಲಿ 40 ಶಾಲೆಗಳ 5,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಕೊಡುಗೆ, ಪರಿಸರದ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಮಣೂರು ಪ್ರೌಢಶಾಲೆಯ 10ನೇ ತರಗತಿಯಲ್ಲಿ ವಿಶಿಷ್ಟ ಶ್ರೇಣಿ ಗಳಿಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸನ್ಮಾನ, ಮಣೂರು ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿಯಲ್ಲಿ ಅತ್ಯುತ್ತಮ ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಶೇ. 100 ಫಲಿತಾಂಶ ಗಳಿಸಲು ಕಾರಣೀಕರ್ತರಾದ ಶಿಕ್ಷಕರನ್ನು ಸೇರಿದಂತೆ ಬಿಸಿಯೂಟದ ಸಹಾಯಕಿಯರನ್ನು ಸನ್ಮಾನಿಸಲಾಯಿತು
ಮುಖ್ಯ ಅಭ್ಯಾಗತರಾಗಿ ಶಿಕ್ಷಣ ಇಲಾಖೆಯ ಡಿ.ಡಿ.ಪಿ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ, ಕೋಟ ಪಡುಕರೆ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸುನಿತಾ, ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಿ, ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ, ಸರಕಾರಿ ಸಂಯುಕ್ತ ಪ್ರೌಢಶಾಲಾ ಮುಖ್ಯ ಶಿಕ್ಷಕ ನಿರಂಜನ್ ನಾಯಕ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್ ಹೊಳ್ಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯರಾಮ್ ಶೆಟ್ಟಿ, ಪ್ರಾಥಮಿಕ ಶಾಲಾ ವಿಭಾಗದ ನಾಗರಾಜ್, ಕೋಟ ಮೊಗವೀರ ಸಂಘದ ಅಧ್ಯಕ್ಷ ರಂಜಿತ್ ಕುಮಾರ್, ಗೀತಾನಂದ ಟ್ರಸ್ಟ್ ನಿರ್ದೇಶಕ ರಕ್ಷತ್ ಕುಂದರ್, ದಿವ್ಯಲಕ್ಷ್ಮಿ ಪ್ರಶಾಂತ್ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್ ಮತ್ತಿತರರು ಇದ್ದರು. ಅಧ್ಯಕ್ಷತೆಯನ್ನು ಗೀತಾನಂದ ಫೌಂಡೇಶನ್ ಮಣೂರು ಪ್ರರ್ತಕ ಆನಂದ್ ಸಿ ಕುಂದರ್ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕ ರಾಮದಾಸ್ ನಾಯಕ್ ಸ್ವಾಗತಿಸಿ, ಪ್ರೌಢಶಾಲಾ ಸಹಶಿಕ್ಷಕ ಶ್ರೀಧರ ಶಾಸ್ತ್ರಿ ವಂದಿಸಿದರು. ಜನತಾ ಸಂಸ್ಥೆಯ ಸಿಬ್ಬಂದಿ ಮಮತಾ ನಿರೂಪಿಸಿದರು.