ನವದೆಹಲಿ, ಜೂ.4: ಲೋಕಸಭೆ ಚುನಾವಣಾ ಫಲಿತಾಂಶ ಜನತೆ ಮತ್ತು ಪ್ರಜಾಪ್ರಭುತ್ವದ ಗೆಲುವು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಣ್ಣಿಸಿದ್ದಾರೆ. ನವದೆಹಲಿಯಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಜನರು ಯಾವುದೇ ಪಕ್ಷಕ್ಕೆ ಬಹುಮತ ನೀಡಿಲ್ಲ. ಭಾರತ್ ಜೋಡೋ ನ್ಯಾಯ್ ಯಾತ್ರೆಯು ಲಕ್ಷಾಂತರ ಜನರನ್ನು ಕಾಂಗ್ರೆಸ್ನೊಂದಿಗೆ ಸಂಪರ್ಕಿಸಿದೆ. ಈ ಚುನಾವಣೆ ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತ್ರವಲ್ಲ ಏಜೆನ್ಸಿಗಳ ವಿರುದ್ಧ ಎಂದು ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇವು ಬಿಜೆಪಿ ವಶದಲ್ಲಿರುವ ಸಂಸ್ಥೆಗಳಾಗಿವೆ ಎಂದರು. ಈ ಚುನಾವಣೆಯು ಸಂವಿಧಾನವನ್ನು ಉಳಿಸುವುದಕ್ಕಾಗಿ ಎಂದು ರಾಹುಲ್ ಗಾಂಧಿ ಹೇಳಿದರು. ಬಿಜೆಪಿ ದೇಶವನ್ನು ನಡೆಸುವುದು ನಮಗೆ ಬೇಕಾಗಿಲ್ಲ ಎಂದು ಜನರು ಒಮ್ಮತದಿಂದ ಮತ್ತು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಅವರು ಹೇಳಿದರು. ಇದು ಬಿಜೆಪಿಗೆ ದೊಡ್ಡ ಸಂದೇಶವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು. ಬುಧವಾರ ಐ.ಎನ್.ಡಿ.ಐ.ಎ ಸಭೆ ನಡೆಸಲಿದೆ ಎಂದರು.
ಲೋಕಸಭೆ ಫಲಿತಾಂಶ ಜನತೆ ಮತ್ತು ಪ್ರಜಾಪ್ರಭುತ್ವದ ಗೆಲುವು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಲೋಕಸಭೆ ಫಲಿತಾಂಶ ಜನತೆ ಮತ್ತು ಪ್ರಜಾಪ್ರಭುತ್ವದ ಗೆಲುವು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
Date: