Sunday, October 6, 2024
Sunday, October 6, 2024

ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

ಕಾರ್ಕಳ, ಜೂ.9: ಸಾಹಿತ್ಯ, ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಹೆಸರಿನಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಡಾ ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಮಟ್ಟದಲ್ಲಿ ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅದ್ಯಕ್ಷ ಮಹಮ್ಮದ್ ಷರೀಫ್ ತಿಳಿಸಿದರು. ಅವರು ಕಾರ್ಕಳ ಪ್ರವಾಸಿ ‌ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ‌ ವಿವರವನ್ನು ನೀಡಿದರು. ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಕನಿಷ್ಠ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪತ್ರಕರ್ತರು ಯಾ ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಶಸ್ತಿಯು ಹತ್ತು ಸಾವಿರ ಪ್ರಶಸ್ತಿ ನಗದು ಹಾಗೂ ರಜತ ಫಲಕ ಒಳಗೊಂಡಿರುತ್ತದೆ‌.

ಸ್ವವಿವರ ಹಾಗೂ ಇತ್ತೀಚಿನ ಭಾವಚಿತ್ರವನ್ನೊಳಗೊಂಡ ಅರ್ಜಿಯನ್ನು ಮೊಹಮ್ಮದ್ ಶರೀಫ್ ಅಧ್ಯಕ್ಷರು, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಗ್ಲೆಗುಡ್ಡೆ ಪೋಸ್ಟ್ ಕುಕ್ಕುಂದೂರು, ಕಾರ್ಕಳ ತಾಲೂಕು 576117, ಇವರಿಗೆ ಜೂನ್ 21 ತಾರೀಕಿನೊಳಗೆ ಕಳುಹಿಸಿಕೊಡಬಹುದಾಗಿದೆ. ತದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹೆಚ್ಚಿನ ಮಾಹಿತಿಗಾಗಿ ‌9845846213,9945857561 ಸಂಪರ್ಕಿಸಬಹುದು ಎಂದರು. ಕಾರ್ಯದರ್ಶಿ ಹರೀಶ್ ಆಚಾರ್ಯ, ಕೋಶಾಧಿಕಾರಿ ಮಹಮ್ಮದ್ ಖಲೀಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!