Sunday, September 29, 2024
Sunday, September 29, 2024

ಸಂತೆಕಟ್ಟೆ ಸರ್ವಿಸ್ ರಸ್ತೆಯಲ್ಲಿ ಸುಗಮ ಸಂಚಾರ; ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಸಂತೆಕಟ್ಟೆ ಸರ್ವಿಸ್ ರಸ್ತೆಯಲ್ಲಿ ಸುಗಮ ಸಂಚಾರ; ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

Date:

ಉಡುಪಿ, ಜೂ.12: ಉಡುಪಿ ನಗರಸಭೆಯ ಕಡಿಯಾಳಿ ವಾರ್ಡಿನ ಕಲ್ಸಂಕ, ಪಾಡಿಗಾರ ಹಾಗೂ ಸಂತೆಕಟ್ಟೆ ರಾಷ್ಟೀಯ ಹೆದ್ದಾರಿ ಕಾಮಗಾರಿ ಪ್ರದೇಶಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲ ಹಿನ್ನೆಲೆಯಲ್ಲಿ ಕಲ್ಸಂಕ ಪಾಡಿಗಾರ ಭಾಗದ ಮುಖ್ಯ ತೋಡುಗಳಲ್ಲಿ ನೀರು ಸರಾಗ ಹರಿವಿಗೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಂತೆಕಟ್ಟೆ ಮುಖ್ಯರಸ್ತೆಯಲ್ಲಿ ವಾಹನಗಳ ಸರ್ವೀಸ್ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ರಸ್ತೆ ದುರಸ್ತಿ, ಸಮರ್ಪಕ ದಾರಿ ದೀಪ ಹಾಗೂ ಸೂಚನಾ ಫಲಕ ಅಳವಡಿಕೆ ಮಾಡುವಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.

ನಗರಸಭೆಯ ಪೌರಾಯುಕ್ತರಾದ ರಾಯಪ್ಪ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ ಕುಂದರ್, ಮಾಜಿ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ನಗರಸಭಾ ಸದಸ್ಯರಾದ ಗೀತಾ ಡಿ. ಶೇಟ್, ಪ್ರಭಾಕರ ಪೂಜಾರಿ, ಮಂಜುಳಾ ನಾಯಕ್, ಉಮೇಶ್ ಶೆಟ್ಟಿ, ಸತೀಶ್ ಕುಲಾಲ್, ಚಿನ್ಮಯಮೂರ್ತಿ, ಸತೀಶ್ ನಾಯ್ಕ್, ಹಾಗೂ ನಗರ ಸಭೆಯ ಅಧಿಕಾರಿಗಳು, ರಾಷ್ಟೀಯ ಹೆದ್ದಾರಿ ಇಲಾಖೆಯ ಇಂಜಿನಿಯರ್ ಹಾಗೂ ಗುತ್ತಿಗೆದಾರ ಕಂಪೆನಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!