Tuesday, October 1, 2024
Tuesday, October 1, 2024

ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ತರಬೇತಿ ಶಿಬಿರ ಉದ್ಘಾಟನೆ

ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ತರಬೇತಿ ಶಿಬಿರ ಉದ್ಘಾಟನೆ

Date:

ಉಡುಪಿ, ಜೂ. 13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಪೆರಂಪಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಪೆರಂಪಳ್ಳಿಯ ಭಾರತೀಯ ವಿಕಾಸ ಟ್ರಸ್ಟ್ ನಲ್ಲಿ ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ತರಬೇತಿ ಶಿಬಿರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ವಿಕಾಸ ಟ್ರಸ್ಟ್ ಹಿರಿಯ ಸಲಹೆಗಾರ ಸಿ ಜಗದೀಶ ಪೈ ಮಾತನಾಡಿ, ಸ್ತ್ರೀಶಕ್ತಿ ದೇಶದ ಶಕ್ತಿ. ದೇಶದ ಸುಭದ್ರತೆಗೆ ಮಹಿಳಾ ಸಬಲೀಕರಣ ಮಹತ್ತರ ಪಾತ್ರ ವಹಿಸುತ್ತದೆ. ಸದಸ್ಯರಿಗೆ ಕಾಲಕಾಲಕ್ಕೆ ಕೌಶಲ್ಯಾಭಿವೃಧಿ ತರಬೇತಿ ಹಮ್ಮಿಕೊಳ್ಳುವುದರಿಂದ ಕ್ರಿಯಾಶೀಲರಾಗಿ ಗುಂಪು ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ ಮಾತನಾಡಿ, ತರಬೇತಿಗಳು ಜ್ಞಾನ ಮತ್ತು ಕೌಶಲ್ಯತೆಯನ್ನು ಹೆಚ್ಚಿಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ಮಹಿಳೆಯರು ಮನೆ, ಮಕ್ಕಳ ಜವಾಬ್ದಾರಿಯ ಜೊತೆ ಸಮಾಜದ ಅಭಿವೃದ್ಧಿಯಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಾರೆ. ತರಬೇತಿಯಲ್ಲಿ ಪಡೆದುಕೊಂಡ ಮಾಹಿತಿಯನ್ನು ಗುಂಪಿನ ಇತರೆ ಸದಸ್ಯರೊಂದಿಗೆ ಹಂಚಿಕೊಂಡು ಅಭಿವೃದ್ಧಿಯ ಪಥದಲ್ಲಿ ಮಹತ್ತರ ಜವಾಬ್ದಾರಿ ವಹಿಸಲು ಮಹಿಳೆಯರು ಕಾರಣೀಭೂತರಾಗುತ್ತಾರೆ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಾಕ್ಷರತಾ ಸಂಸ್ಥೆಯ ಮೀರಾ ಜೆ ಅಮೂಲ್ಯ, ಶಿಶು ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಕಿಯರು, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ ಹಾದಿಮನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಟರ್ ಸ್ಪೆಷಲಿಸ್ಟ್ ದೀಪಾ ನಿರೂಪಿಸಿದರು. ಜಿಲ್ಲಾ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!