ಬೆಂಗಳೂರು, ಜೂ.16: ಲೋಕಸಭಾ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವ ಮೂಲಕ ರಾಜ್ಯದ ಜನತೆಗೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಿದೆ. ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ.25.92 ರಿಂದ ಶೇ. 29.84 ಹಾಗೂ ಡೀಸೆಲ್ ಮಾರಾಟ ತೆರಿಗೆಯನ್ನು ಶೇ. 14.34ರಿಂದ ಶೇ. 18.44 ರಷ್ಟು ಹೆಚ್ಚಳ ಮಾಡಿ ಶನಿವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 3 ರೂ. ಏರಿಕೆಯಾಗಿದೆ. ಇಂಧನ ಬೆಲೆ ಏರಿಕೆಯಿಂದ ಮುಂದಿನ ದಿನಗಳಲ್ಲಿ ಬಸ್, ಆಟೋ, ಟ್ಯಾಕ್ಸಿ ಟೆಂಪೋ, ಸಾಗಣೆಯ ದರಗಳಲ್ಲಿ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ರಾಜ್ಯದಲ್ಲಿ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗುವ ಎಲ್ಲಾ ಸಾಧ್ಯತೆಗಳಿವೆ.
ಗ್ಯಾರಂಟಿ ಹೊರೆ; ವಿಪಕ್ಷ ಕಿಡಿ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗುತ್ತಿದ್ದು, ಇದನ್ನು ಭರಿಸಲು ತೈಲಬೆಲೆ ಏರಿಕೆಯಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ವಾಗ್ದಾಳಿ ನಡೆಸಿದೆ.