ಬೆಂಗಳೂರು, ಜೂ.17: ಅಬಕಾರಿ ಸುಂಕ ಏರಿಕೆ ಬಗ್ಗೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಬಿಜೆಪಿಯವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 113 ಡಾಲರ್ ಇತ್ತು. 2015 ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ ಇಳಿಸಿ, ಜನರ ಹೊರೆ ಕಡಿಮೆ ಮಾಡುವ ಕಾಳಜಿಯನ್ನು ನರೇಂದ್ರ ಮೋದಿ ಅವರು ತೋರಲಿಲ್ಲ. ಬಿಜೆಪಿಯವರು ಯಾರ ವಿರುದ್ಧ ಹೋರಾಡಬೇಕು? ಕರ್ನಾಟಕ ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತ ಬಂದಿದ್ದರೂ, ಬಿಜೆಪಿಯವರು ದನಿ ಎತ್ತಿಲ್ಲ? ತೆರಿಗೆ ಅನ್ಯಾಯವಾದಾಗ ಸಂಸದರು ಈ ವಿಷಯದ ಕುರಿತು ಮಾತನಾಡಿಲ್ಲ; ರಾಜ್ಯಕ್ಕೆ 15ನೇ ಹಣಕಾಸು ಆಯೋಗವು ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿದ್ದರೂ ಕೇಂದ್ರ ಸರ್ಕಾರ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಆಯವ್ಯಯದಲ್ಲಿ ನಿರ್ಮಲಾ ಸೀತಾರಾಮನ್ ಅವರು 5,000 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದರೂ ಬಿಡಿಗಾಸೂ ನೀಡಿಲ್ಲ. ಈ ವಿಷಯಗಳ ಕುರಿತು ಬಿಜೆಪಿಯವರು ದನಿ ಎತ್ತಿದ್ದಾರೆಯೇ? ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಬಿಜೆಪಿಯವರಿಗೆ ಪ್ರತಿಭಟಿಸುವ ನೈತಿಕತೆಯಿಲ್ಲ: ಮುಖ್ಯಮಂತ್ರಿ ಸಿದ್ಧರಾಮಯ್ಯ
ಬಿಜೆಪಿಯವರಿಗೆ ಪ್ರತಿಭಟಿಸುವ ನೈತಿಕತೆಯಿಲ್ಲ: ಮುಖ್ಯಮಂತ್ರಿ ಸಿದ್ಧರಾಮಯ್ಯ
Date: