ಉಡುಪಿ, ಜೂ.18: ಪಡಿ ಸಂಸ್ಥೆ ಮಂಗಳೂರು, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಪಂಚಾಯತ್ ರಾಜ್ ಕಾಯಿದೆ – 1993 ಮತ್ತು ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್ 9 ಮತ್ತು 21ರ ಕುರಿತು ತರಬೇತಿಯನ್ನು ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರಿಗೆ ಮತ್ತು ಉಪ ಸಮಿತಿಯ ಸದಸ್ಯರಿಗೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ್ ಕೋಟ್ಯಾನ್ ಇವರು ಶಿಕ್ಷಣ ಹಕ್ಕು ಕಾಯಿದೆಯ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಪಡಿ ಸಂಸ್ಥೆಯ ತರಬೇತಿ ಕಾರ್ಯಕ್ರಮ ಬಹಳಷ್ಟು ಸಹಾಯಕಾರಿಯಾಗಿದೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ನೀಡುವುದು ಗ್ರಾಮ ಪಂಚಾಯತ್ ಕರ್ತವ್ಯವಾಗಿದೆ, ಪಡಿ ಸಂಸ್ಥೆಯ ವತಿಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಈಗಾಗಲೇ ನಮ್ಮ ಗ್ರಾಮ ಪಂಚಾಯತಯಲ್ಲಿ ನಡೆದಿದೆ ಮತ್ತು ಕಾರ್ಯಕ್ರಮ ಯಶಸ್ಸನ್ನು ಕಂಡುಕೊಂಡಿದೆ.
ಸಂಪನ್ಮೂಲ ವ್ಯಕ್ತಿಗಳಾದ ಹೆಚ್. ಜಯವಂತ ರಾವ್ ಇವರು ಚುನಾಯಿತ ಸದಸ್ಯರಿಗೆ ಪಂಚಾಯತ್ ರಾಜ್ ಕಾಯಿದೆ – 1993 ಮತ್ತು ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್ 9 ಮತ್ತು 21 ಬಗ್ಗೆ ತರಬೇತಿ ನೀಡಿದರು ಮತ್ತು ಈ ಸಂದರ್ಭದಲ್ಲಿ ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್ 9ನಲ್ಲಿ ತಿಳಿಸಿರುವ ಸ್ಥಳೀಯ ಸರಕಾರದ ಜವಾಬ್ದಾರಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಕ್ರಿಯಾ ಯೋಜನೆಯನ್ನು ತಯಾರಿಸಲಾಯಿತು ಮತ್ತು ಪಂಚಾಯತ್ ಸೂಚನ ಫಲಕದಲ್ಲಿ ಅಳವಡಿಸಲಾಗಿದೆ.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಕೇಶವ್ ಕೋಟ್ಯಾನ್, ಉಪಾಧ್ಯಕ್ಷರಾದ ರೂಪ ನಾಯಕ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್, ಕಾರ್ಯದರ್ಶಿ ಶಕುಂತಳಾ ಶೆಟ್ಟಿ, ಸಂಪನ್ಮೂಲ ವ್ಯಕ್ತಿ ಜಯವಂತ ರಾವ್, ಪಡಿ ಸಂಸ್ಥೆಯ ತರಬೇತಿ ಸಂಯೋಜಕರಾದ ವಿವೇಕ್, ವಾಸು ಆಚಾರ್ ಜೊತೆ ಕಾರ್ಯದರ್ಶಿ ಶಿಕ್ಷಣ ಸಂಪನ್ಮೂಲ ಕೇಂದ್ರ ಉಡುಪಿ, ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಉಪಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.