Sunday, September 29, 2024
Sunday, September 29, 2024

ಪಾಂಡೇಶ್ವರ: ಬಿಲ್ಲವ ಯುವ ವೇದಿಕೆ ವತಿಯಿಂದ ನೋಟ್‌ಬುಕ್ ವಿತರಣೆ

ಪಾಂಡೇಶ್ವರ: ಬಿಲ್ಲವ ಯುವ ವೇದಿಕೆ ವತಿಯಿಂದ ನೋಟ್‌ಬುಕ್ ವಿತರಣೆ

Date:

ಕೋಟ, ಜೂ.18: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ವತಿಯಿಂದ ಪಾಂಡೇಶ್ವರ ಶಾಲೆಯಲ್ಲಿ ವಿದ್ಯಾಭ್ಯಾಸಗೈಯುತ್ತಿರುವ ಸಮುದಾಯದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಸಸಿ ವಿತರಣೆ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಇರುವ 38 ಕಲ್ಪತರು ಸ್ವ ಸಹಾಯ ಸಂಘದ ಸದಸ್ಯರ 225 ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 90 % ಅಂಕ ಪಡೆದ ಆಕಾಶ್ ಪೂಜಾರಿ ಪಾಂಡೇಶ್ವರ ಹಾಗೂ ನಿಕಿತಾ ಪೂಜಾರಿ ಯಡಬೆಟ್ಟು ಇವರುಗಳನ್ನು ಗೌರವಿಸಲಾಯಿತು. ಆಗಮಿಸಿದ ಎಲ್ಲರಿಗೂ ನೆಲ್ಲಿ ಹಾಗೂ ಸೀತಾಫಲ ಸಸ್ಯಗಳನ್ನು ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಬಿಲ್ಲವ ಯುವ ವೇದಿಕೆ ಅಧ್ಯಕ್ಷ ರವಿಕಿರಣ್ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಾಂಡೇಶ್ವರ ಪಂಚಾಯತ್ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ, ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ ಕುಮಾರ್, ಬಿಲ್ಲವ ಸಮುದಾಯದ ಮುಖಂಡರಾದ ಐರೋಡಿ ವಿಠ್ಠಲ್ ಪೂಜಾರಿ, ದಯಾನಂದ ಪೂಜಾರಿ, ಶೇಖರ್ ಪೂಜಾರಿ ಮೂಡುಕಟ್, ಯಡಬೆಟ್ಟು ಪಂಜು ಪೂಜಾರಿ, ಗೋಪಾಲ ಪೂಜಾರಿ ಮಠತೋಟ, ಕೋಡಿ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ, ಪಾಂಡೇಶ್ವರ ಗ್ರಾಮ ಪಂಚಾಯತ್ ಸದಸ್ಯೆ ಸುಜಾತಾ ವೆಂಕಟೇಶ್ ಪೂಜಾರಿ ಉಪಸ್ಥಿತರಿದ್ದರು. ಬಿಲ್ಲವ ಯುವ ವೇದಿಕೆಯ ಮಾಜಿ ಅಧ್ಯಕ್ಷ ಸುರೇಶ ಪೂಜಾರಿ ಪಾಂಡೇಶ್ವರ ಹಾಗೂ ಸೀಮಾ ವಿಜಯ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!