Sunday, September 29, 2024
Sunday, September 29, 2024

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ: ತಲಾ 1 ಕೋಟಿ ಅಪಘಾತ ಪರಿಹಾರ ವಿಮೆ ವಿತರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ: ತಲಾ 1 ಕೋಟಿ ಅಪಘಾತ ಪರಿಹಾರ ವಿಮೆ ವಿತರಣೆ

Date:

ಬೆಂಗಳೂರು, ಜೂ.18: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೇವೆಯಲ್ಲಿದ್ದ ನೌಕರರ 4 ಅವಲಂಬಿತರಿಗೆ ತಲಾ 1 ಕೋಟಿ ಅಪಘಾತ ಪರಿಹಾರ ವಿಮೆಯನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರು ವಿತರಿಸಿದರು. ಬಳಿಕ ಮಾತನಾಡಿದ ಅವರು, ಒಟ್ಟು ಇಲ್ಲಿಯವರೆಗೆ ಇದೂ ಸೇರಿ 17 ಸಿಬ್ಬಂದಿಗಳ ಕುಟುಂಬಕ್ಕೆ ವಿಮಾ‌ ನೀಡಿಕೆ ಹಾಗೂ ಕುಟುಂಬ ಕಲ್ಯಾಣ ಯೋಜನೆಯಡಿ ಸೇವೆಯಲ್ಲಿದ್ದು ಮೃತ ಪಟ್ಟ 23 ನೌಕರರ ಅವಲಂಬಿತರಿಗೆ ತಲಾ 10 ಲಕ್ಷ ಪರಿಹಾರ ಹಣ ನೀಡಿಕೆ ಇಲ್ಲಿಯವರೆಗೆ ಇದೂ ಸೇರಿ ಒಟ್ಟು 39 ಸಿಬ್ಬಂದಿಗಳ ಕುಟುಂಬಕ್ಕೆ ಹಣ ನೀಡಿಕೆಯನ್ನು ಮಾಡಲಾಗಿದೆ. ನಿಗಮದ ವಾಹನಗಳಲ್ಲಿ ಪ್ರಯಾಣಿಸುತ್ತಿರುವಾಗ ಅಪಘಾತಕ್ಕೊಳಪಟ್ಟು ಮೃತರಾದ 4 ಪ್ರಯಾಣಿಕರ ಅವಲಂಭಿತರಿಗೆ ತಲಾ 10 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ. ನಿಗಮದ ವತಿಯಿಂದ ಕಾರ್ಮಿಕರ ಕಲ್ಯಾಣಕ್ಕಾಗಿ ಹಾಗೂ ಪ್ರಯಾಣಿಕರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಮೃತಪಟ್ಟವರ ಜೀವ ಅಮೂಲ್ಯವಾದದ್ದು, ಅದನ್ನು ಮರಳಿ ತರಲಾಗುವುದಿಲ್ಲ. ಆದರೆ ಅವರ ಕುಟುಂಬದ ಆರ್ಥಿಕ ಸ್ವಾವಲಂಬನೆಗಾಗಿ ನಿಗಮವು ರೂಪಿಸಿರುವ ಯೋಜನೆ ದೂರದೃಷ್ಠಿಯನ್ನು ಹೊಂದಿದೆ. ಈ ಮೊತ್ತವನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳ ವಿದ್ಯಾಭ್ಯಾಸ ಹಾಗೂ ಮನೆ ಕಟ್ಟಿಕೊಳ್ಳಲು ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದೆ. ನಿಗಮವು ಯಶಸ್ವಿಯಾಗಿ ಶಕ್ತಿ ಯೋಜನೆ ಅನುಷ್ಠಾನಗೊಳಿಸಲು ಮುಖ್ಯ ಪಾತ್ರ ವಹಿಸಿರುವ ನಿಗಮದ ಚಾಲಕರು, ನಿರ್ವಾಹಕರು, ಸಿಬ್ಬಂದಿಗಳು, ಅಧಿಕಾರಿಗಳು ಹಾಗೂ ಕಾರ್ಮಿಕ ಮುಖಂಡರುಗಳ ಪಾತ್ರ ಅಭಿನಂದನೀಯ. ನಿಗಮದ ವಿದ್ಯಾ ಚೇತನ ವಿದಾರ್ಥಿ ವೇತನ ಯೋಜನೆಯ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆಯನ್ನು ನೀಡಿದ್ದೇನೆ.

ಕ.ರಾ.ರ.ಸಾ ನಿಗಮ ಅಧ್ಯಕ್ಷ ಶ್ರೀನಿವಾಸ್ ಗುಬ್ಬಿ, ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಕಾರ್ಮಿಕ ಸಂಘಟನೆಗಳ ಮುಖಂಡರುಗಳಾದ ಅನಂತಸುಬ್ಬರಾವ್, ವಿಜಯಭಾಸ್ಕರ್, ರೇವಪ್ಪ, ಮಂಜುನಾಥ್, ಚಂದ್ರಶೇಖರ್, ನಾಗರಾಜು, ವೆಂಕಟರಮಣಪ್ಪ, ಜಯರಾಜ ಅರಸು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!