Sunday, November 24, 2024
Sunday, November 24, 2024

ಕಾನೂನು ಅಧಿಕಾರಿ, ಸಹಾಯಕ ಕಾನೂನು ಅಧಿಕಾರಿ ನೇಮಕಾತಿ: ಅರ್ಜಿ ಆಹ್ವಾನ

ಕಾನೂನು ಅಧಿಕಾರಿ, ಸಹಾಯಕ ಕಾನೂನು ಅಧಿಕಾರಿ ನೇಮಕಾತಿ: ಅರ್ಜಿ ಆಹ್ವಾನ

Date:

ಉಡುಪಿ, ಜೂ.19: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ, ಉಚ್ಛ ನ್ಯಾಯಾಲಯ ಹಾಗೂ ಇತರೇ ನ್ಯಾಯಾಲಯಗಳಲ್ಲಿ ದಾಖಲಾಗಿ ಬಾಕಿಯಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಕಂದಾಯ ಆಯುಕ್ತಾಲಯದಲ್ಲಿ ಕಾನೂನು ಕೋಶವನ್ನು ಸ್ಥಾಪಿಸಲು ಕಾನೂನು ಅಧಿಕಾರಿ (ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ತಲಾ ಒಂದರಂತೆ)- 04 ಹುದ್ದೆಗಳು ಹಾಗೂ ಸಹಾಯಕ ಕಾನೂನು ಅಧಿಕಾರಿ -04 ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಅಧಿಕಾರಿ ಹುದ್ದೆಗೆ ನಿವೃತ್ತ ಸರ್ಕಾರಿ ಕಾನೂನು ಅಧಿಕಾರಿ ಅಥವಾ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಎಲ್.ಎಲ್.ಬಿ
ವಿದ್ಯಾರ್ಹತೆ ಹೊಂದಿರುವ ನಿವೃತ್ತ ಕಂದಾಯ ಅಧಿಕಾರಿ/ ನಿವೃತ್ತ ಕೆ.ಎ.ಎಸ್ ಅಧಿಕಾರಿ ಅಥವಾ ಕನಿಷ್ಠ 10 ವರ್ಷಗಳ ಕಾಲ ಭೂ ಕಂದಾಯ ವ್ಯಾಜ್ಯಗಳ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ವಕೀಲರು ಮತ್ತು ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ ಇಂಟರ್ನ್ಶಿಪ್‌ನಲ್ಲಿರುವ ಕಾನೂನು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯಲ್ಲಿ ವೈಯಕ್ತಿತ ಮಾಹಿತಿ, ವಿದ್ಯಾರ್ಹತೆ ಹಾಗೂ ಸೇವಾ ಅನುಭವದ ದೃಢೀಕೃತ ದಾಖಲೆಗಳನ್ನು ಲಗತ್ತಿಸಿ, ಜೂನ್ 20 ರ ಒಳಗಾಗಿ ಇ-ಮೇಲ್ [email protected] ಗೆ ಸಲ್ಲಿಸಬಹುದಾಗಿದೆ ಎಂದು ಕಂದಾಯ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!