ಬಾರಮುಲ್ಲಾ, ಜೂ.19: ಜಮ್ಮು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಬೆನ್ನಲ್ಲೇ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಕಳೆದ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆ ನಡೆಸಿ ಜಮ್ಮು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದಿದ್ದರು. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಜಮ್ಮು ಕಾಶ್ಮೀರ: ಬಾರಮುಲ್ಲಾ ಪ್ರದೇಶದಲ್ಲಿ ಇಬ್ಬರು ಉಗ್ರರ ವಧೆ
ಜಮ್ಮು ಕಾಶ್ಮೀರ: ಬಾರಮುಲ್ಲಾ ಪ್ರದೇಶದಲ್ಲಿ ಇಬ್ಬರು ಉಗ್ರರ ವಧೆ
Date: