ಮಂಗಳೂರು, ಜೂ.22: ಮಂಗಳೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದಂತಹ ರವೀಂದ್ರ ಎಂ ಜೋಶಿ ವಹಿಸಿದ್ದರು. ಮಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಶ್ರಮಿಸುವುದಾಗಿ ತಿಳಿಸಿದರು. ಮಂಗಳೂರು ವಕೀಲರ ಸಂಘದ ಎಲ್ಲಾ ಅಭಿವೃದ್ಧಿ ಕಾರ್ಯಗಳಲ್ಲಿ ಕೈಜೋಡಿಸುವುದಾಗಿಯೂ ಹೇಳಿ ಮಂಗಳೂರು ವಕೀಲರ ಸಂಘಕ್ಕೆ ಶಾಸಕರ ಅನುದಾನದಿಂದ 10 ಲಕ್ಷ ಘೋಷಿಸಿದರು.
ಮಂಗಳೂರು ವಕೀಲ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಪೃಥ್ವಿರಾಜ್ ರೈ ನೂತನ ಸಮಿತಿಗೆ ಶುಭ ಹಾರೈಸಿದರು. ಸಂಘದ ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ ಸಭೆಯಲ್ಲಿ ಉಪಸ್ಥಿತರಿದ್ದರು. ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್ ವಂದಿಸಿದರು. ಮಂಗಳೂರು ವಕೀಲರ ಸಂಘದ ಹಿರಿಯ ಸಮಿತಿಯ ಸದಸ್ಯರಾದ ಆಶಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು.