Sunday, October 6, 2024
Sunday, October 6, 2024

ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಭೆ

ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಭೆ

Date:

ಉಡುಪಿ, ಜು.3: ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಭೆಯು ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜಿನಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಉಪನಿರ್ದೇಶಕರಾದ ಮಾರುತಿಯವರು, 2024 ರ ದ್ವಿತೀಯ ಪಿ.ಯು. ಫಲಿತಾಂಶದಲ್ಲಿ ಜಿಲ್ಲೆ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆಯುವಲ್ಲಿ ಖಾಸಗಿ ಕಾಲೇಜುಗಳ ಸಹಕಾರ ಮಹತ್ವಪೂರ್ಣವಾಗಿದೆ. ಮುಂದಿನ ದಿನಗಳಲ್ಲೂ ಮಕ್ಕಳಿಗೆ ಶೈಕ್ಷಣಿಕ ಒತ್ತಡ ಅತಿಯಾಗದ ರೀತಿಯಲ್ಲಿ ನೋಡಿಕೊಂಡು ಅವರ ಶೈಕ್ಷಣಿಕ ಬದುಕು ಗಟ್ಟಿಗೊಳಿಸುವ ಕರ‍್ಯದಲ್ಲಿ ಎಲ್ಲಾ ಪ್ರಾಂಶುಪಾಲರು ತೊಡಗಬೇಕು ಎಂದು ಹೇಳಿದರು.

ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರ್ ಮಾತನಾಡಿ, ಇಲಾಖಾ ವತಿಯಿಂದ ನಡೆಯುವ ಎಲ್ಲಾ ಶೈಕ್ಷಣಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳಿಗೆ ಸಂಪೂರ್ಣವಾದ ಸಹಕಾರ ನೀಡಿ ಮುಂದಿನ ವರ್ಷದಲ್ಲೂ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವತ್ತ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಬದ್ದತೆಯನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ಪ್ರಸಕ್ತ ವಾರ್ಷಿಕ ಕಾರ್ಯಚಟುವಟಿಕೆಗಳ ಬಗ್ಗೆ ಸಮಾಲೋಚಿಸಲಾಯಿತು. ಸಂಘದ ಕಾರ್ಯದರ್ಶಿಗಳಾದ ಡಾ.ದಯಾನಂದ ಪೈ ಸ್ವಾಗತಿಸಿ, ಕೋಶಾಧಿಕಾರಿ ಸಂದೀಪ್ ಕುಮಾರ್ ವಂದಿಸಿದರು. ವೇದಿಕೆಯಲ್ಲಿ ಸಹ ಕಾರ್ಯದರ್ಶಿ ರಾಮದಾಸ್ ಪ್ರಭು, ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಯೋಜಕರಾದ ಐವಾನ್ ಸುವಾರಿಸ್ ಇದ್ದರು. ವಿವಿಧ ಪ.ಪೂ.ಕಾಲೇಜುಗಳ ಪ್ರಾಂಶುಪಾಲರು ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!