Sunday, October 6, 2024
Sunday, October 6, 2024

ಪುಸ್ತಕ ಬಹುಮಾನ: ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನ

ಪುಸ್ತಕ ಬಹುಮಾನ: ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನ

Date:

ಉಡುಪಿ, ಜು.3: ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪುಸ್ತಕಕ್ಕೆ 25,000 ರೂ.ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹರ‍್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಸಲ್ಲಿಸಬಹುದಾಗಿದ್ದು, ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು ಮತ್ತು ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ ರಸ್ತೆ, ಬೆಂಗಳೂರು 560002, ಇವರಿಗೆ ಜುಲೈ 25 ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂ.ಸಂಖ್ಯೆ: 080-22113146 ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಕಛೇರಿಯ ದೂ.ಸಂಖ್ಯೆ: 0820-2986168 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!