ಕೋಟ, ಜು.6: ಸ್ವಾವಲಂಬಿ ಬದುಕಿನತ್ತ ಪ್ರತಿಯೊಬ್ಬರು ಮುಂದಾಗಬೇಕು ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಕೋಟದ ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿಯಲ್ಲಿ ಹಮ್ಮಿಕೊಂಡ ಭಾರತ ಸರಕಾರದ ಪಿ.ಎಂ ವಿಶ್ವಕರ್ಮ ಯೋಜನೆಯಡಿ ಒಂದು ವಾರಗಳಕಾಲ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಸ್ವ ಉದ್ಯಮದ ಮೂಲಕ ಯಶಸ್ಸು ಸಾಧಿಸಲು ಸಾಧ್ಯವಿದೆ. ಅದಕ್ಕೆ ಸರಕಾರದ ಯೋಜನೆಗಳು ಅದಕ್ಕೆ ಸಂಬಂಧಿಸಿದ ತರಬೇತಿಗಳು ಸಹಕಾರಿಯಾಗಲಿದೆ. ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರು ಕರಾರುವಕ್ಕಾಗಿ ಅನುಷ್ಠಾನಗೊಳಿಸಬೇಕು ಎಂದರಲ್ಲದೆ ಇದೇ ವೇಳೆ ಪ್ರಸ್ತುತ ಕಾಲಘಟ್ಟದಲ್ಲಿ ಮಾಧ್ಯಮ ಹಾಗೂ ಪರಿಸರ ಕಾಳಜಿಯ ವಿಷಯಗಳನ್ನು ವಿವರವಾಗಿ ಶಿಬಿರಾರ್ಥಿಗಳಿಗೆ ನೀಡಿದರು.
ಪರಿಸರ ಜಾಗೃತಿಯ ಪ್ರತಿಜ್ಞಾ ವಿಧಿಯನ್ನು ಶಿಬಿರಾರ್ಥಿಗಳಿಗೆ ಬೋಧಿಸಲಾಯಿತು. ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿಯ ಮುಖ್ಯಸ್ಥ ಚೇತನ್ ಬಂಗೇರ, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.