ಹರಾರೆ, ಜು.7: ಹರಾರೆಯಲ್ಲಿ ಭಾನುವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಆತಿಥೇಯ ಜಿಂಬಾಬ್ವೆಯನ್ನು 100 ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ನಿಗದಿತ 20 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿತು. ಅಭಿಷೇಕ್ ಶರ್ಮಾ 47 ಎಸೆತಗಳಲ್ಲಿ ಶತಕ ಬಾರಿಸಿದರು. ರುತುರಾಜ್ ಗಾಯಕ್ವಾಡ್ 47 ಎಸೆತಗಳಲ್ಲಿ 77 ರನ್ ಕೊಡುಗೆ ನೀಡಿದರು. ರಿಂಕು ಸಿಂಗ್ ರನ್ ರೇಟ್ ವೇಗವನ್ನು ಹೆಚ್ಚಿಸಲು ಆಟವಾಡುತ್ತಾ, 22 ಎಸೆತಗಳಲ್ಲಿ ಅಜೇಯ 48 ರನ್ ಗಳಿಸಿದರು. ಜಿಂಬಾಬ್ವೆ ಪರ ಬ್ಲೆಸಿಂಗ್ ಮುಜರಬಾನಿ ಮತ್ತು ವೆಲ್ಲಿಂಗ್ಟನ್ ಮಸಕಡ್ಜಾ ತಲಾ ಒಂದು ವಿಕೆಟ್ ಪಡೆದರು.
ಜಿಂಬಾಬ್ವೆ 18.4 ಓವರ್‌ಗಳಲ್ಲಿ 134 ರನ್‌ಗಳಿಗೆ ಆಲೌಟಾಯಿತು. ವೆಸ್ಲಿ ಮಾಧವೆರೆ 39 ಎಸೆತಗಳಲ್ಲಿ 43 ರನ್ ಗಳಿಸಿದರು ಮತ್ತು ಬ್ರಿಯಾನ್ ಬೆನೆಟ್ ಒಂಬತ್ತು ಎಸೆತಗಳಲ್ಲಿ 26 ರನ್ ಗಳಿಸಿದರು. ಮುಖೇಶ್ ಕುಮಾರ್ ಮತ್ತು ಅವೇಶ್ ಖಾನ್ ತಲಾ 3 ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ಭಾರತ ಐದು ಪಂದ್ಯಗಳ ಸರಣಿಯಲ್ಲಿ 1-1ರಲ್ಲಿ ಸಮಬಲ ಸಾಧಿಸಿದೆ.