Friday, September 20, 2024
Friday, September 20, 2024

ವಿವಿಧ ಯೋಜನೆ: ಅರ್ಜಿ ಆಹ್ವಾನ

ವಿವಿಧ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಜು.9: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಟಾನಗೊಳಿಸಿರುವ ಯೋಜನೆಗಳಾದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಬ್ಯಾಟರಿಚಾಲಿತ ಗಾಲಿಕುರ್ಚಿ, ನಿರಾಮಯ ಯೋಜನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!