ಉಡುಪಿ, ಜು. 9: ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾದಂತಹ ಸಾಕಷ್ಟು ಸಾಂಕ್ರಮಿಕ ರೋಗಗಳು ಹರಡುವ ಸಂಭವವಿರುವುದರಿಂದ ಸಾರ್ವಜನಿಕರು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಗೂಡಂಗಡಿ ಮಾಲೀಕರು ತಮ್ಮಲ್ಲಿರುವ ಎಳನೀರು ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಬೇಕು. ಚರಂಡಿಗೆ ಕಸ ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯದೇ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ನಗರಸಭೆಯು ತನ್ನ ವ್ಯಾಪ್ತಿಯಲ್ಲಿ ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ನಿರಂತರ ಶ್ರಮಿಸುತ್ತಿದ್ದು, ಸರ್ವೆ ನಡೆಸಿ ಸ್ವಚ್ಛತೆ ವಹಿಸುವ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಅಂಗಡಿಯ ಸುತ್ತಮುತ್ತಲು ಇರುವ ಕಸ ತ್ಯಾಜ್ಯಗಳನ್ನು ಸಂಗ್ರಹಿಸಿ ನಗರಸಭೆಗೆ ವಿಲೇವಾರಿ ಮಾಡಲು ಸೂಚಿಸಲಾಗುತ್ತಿದೆ. ಇದರ ಹೊರತಾಗಿಯೂ ಯಾವುದೇ ಅಂಗಡಿ ಮುಂಗಟ್ಟುಗಳಲ್ಲಿ ಈ ಬಗ್ಗೆ ಕ್ರಮ ವಹಿಸದೇ ಇದ್ದಲ್ಲಿ ನೋಟಿಸ್ ನೀಡಿ 5000 ರೂ. ದಂಡ ವಿಧಿಸುವುದರೊಂದಿಗೆ ಅಂತಹ ಅಂಗಡಿ ಮುಂಗಟ್ಟುಗಳ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ನಗರಸಭೆ ಸೂಚನೆ
ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ನಗರಸಭೆ ಸೂಚನೆ
Date: