ಮಣಿಪಾಲ, ಜು.14: ಕಾಪು ತಾಲೂಕಿನ ಪಾದೂರು ಮತ್ತು ಕಳತ್ತೂರು ಗ್ರಾಮದ ಇಂಡಿಯನ್ ಸ್ಟ್ರೆಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ 2ನೇ ಹಂತದ ಯೋಜನೆಯಿಂದ ಮನೆ ಕಳೆದುಕೊಳ್ಳುವ ಭೂಸಂತ್ರಸ್ಥರಿಗೆ ಪುನರ್ ವಸತಿ ಮತ್ತು ಪುನರ್ ನಿರ್ಮಾಣದ ಯೋಜನೆಯಡಿಯಲ್ಲಿ ಒದಗಿಸಲಾಗುವ ಸೌಲಭ್ಯ ಹಾಗೂ ಭೂಸ್ವಾಧೀನವಾಗುತ್ತಿರುವ ಜಮೀನಿನ ಪರಿಹಾರ ಮೊತ್ತದ ವಿಚಾರದ ಕುರಿತಾಗಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕೆ.ಐ.ಎ.ಡಿ.ಬಿ ಎಸ್.ಎಲ್.ಓ ರಾಜು ಕೆ., ಸಹಾಯಕ ಆಯುಕ್ತರಾದ ರಶ್ಮಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ್, ಕಾಪು ತಹಶೀಲ್ದಾರರಾದ ಪ್ರತಿಭಾ ಆರ್, ಐ.ಎಸ್.ಪಿ.ಆರ್.ಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ಇಂಡಿಯನ್ ಸ್ಟ್ರೆಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ 2ನೇ ಹಂತದ ಯೋಜನೆ- ಜಮೀನಿನ ಪರಿಹಾರ ಮೊತ್ತದ ವಿಚಾರದ ಸಭೆ
ಇಂಡಿಯನ್ ಸ್ಟ್ರೆಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ 2ನೇ ಹಂತದ ಯೋಜನೆ- ಜಮೀನಿನ ಪರಿಹಾರ ಮೊತ್ತದ ವಿಚಾರದ ಸಭೆ
Date: